1 Kings 8:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈಗಲಾದರೋ ಇಸ್ರೇಲಿನ ದೇವರಾದ ಯೆಹೋವನೇ, ನಿನ್ನ ಸೇವಕನೂ ನನ್ನ ತಂದೆಯೂ ಆದ ದಾವೀದನಿಗೆ ನೀನು ಮಾಡಿದ ಇತರ ವಾಗ್ದಾನಗಳನ್ನು ಈಗ ನೆರವೇರಿಸು. ನೀನು ನನ್ನ ತಂದೆಗೆ, ‘ದಾವೀದನೇ, ನೀನು ನನ್ನನ್ನು ಅನುಸರಿಸಿದಂತೆ ನಿನ್ನ ಮಕ್ಕಳೂ ಎಚ್ಚರಿಕೆಯಿಂದ ನನ್ನನ್ನು ಅನುಸರಿಸಿದರೆ, ನಿನ್ನ ಕುಟುಂಬದಲ್ಲಿನ ಯಾವನಾದರೊಬ್ಬನು ಇಸ್ರೇಲಿನ ಜನರನ್ನು ಆಳುತ್ತಲೇ ಇರುವನು’ ಎಂದು ಹೇಳಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲ್ ದೇವರಾದ ಯೆಹೋವನೇ, ನೀನು ನನ್ನ ತಂದೆಯಾದ ದಾವೀದನಿಗೆ, ‘ನಿನ್ನ ಸಂತಾನದವರು ನಿನ್ನಂತೆ ಜಾಗರೂಕತೆಯಿಂದ ನನ್ನ ಮಾರ್ಗದಲ್ಲೇ ನಡೆದುಕೊಳ್ಳುವುದಾದರೆ, ಅವರು ತಪ್ಪದೆ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು’ ಎಂಬುದಾಗಿ ವಾಗ್ದಾನ ಮಾಡಿದಿಯಲ್ಲಾ ಅದನ್ನು ನೆರವೇರಿಸು.
Kannada BSI Bible 2016
ನೀನು ನಿನ್ನ ಬಾಯಿಂದ ಹೇಳಿದ್ದನ್ನು ಇಂದಿನ ಪ್ರಕಾರವೇ ನಿನ್ನ ಕೈಯಿಂದ ನೆರವೇರಿಸಿದ ಕಾರಣ ಈಗ ಇಸ್ರಾಯೇಲಿನ ದೇವರಾದ ಕರ್ತನೇ, ನಿನ್ನ ಮಕ್ಕಳು ತಮ್ಮ ಮಾರ್ಗಕ್ಕೆ ಜಾಗ್ರತೆಯಾಗಿದ್ದು ನೀನು ನನ್ನ ಮುಂದೆ ನಡೆದ ಪ್ರಕಾರ ಅವರು ನನ್ನ ಮುಂದೆ ನಡೆದರೆ ಇಸ್ರಾಯೇಲಿನ ಸಿಂಹಾಸನದ ಮೇಲೆ ನನ್ನ ಸಮ್ಮುಖದಲ್ಲಿ ತಪ್ಪದೆ ಕುಳಿತುಕೊಳ್ಳುವಂತೆ ಮಾಡುವೆನು ಎಂದು ನೀನು ನನ್ನ ತಂದೆಯೂ, ನಿನ್ನ ಸೇವಕನಾದ ದಾವೀದನಿಗೆ ಹೇಳಿದ ಮಾತು ನೆರವೇರಿಸು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್‍ದೇವರಾದ ಯೆಹೋವನೇ, ನೀನು ನನ್ನ ತಂದೆಯಾದ ದಾವೀದನಿಗೆ - ನಿನ್ನ ಸಂತಾನದವರು ನಿನ್ನಂತೆ ಜಾಗರೂಕತೆಯಿಂದ ನನ್ನ ಮಾರ್ಗದಲ್ಲೇ ನಡೆದುಕೊಳ್ಳುವದಾದರೆ ಅವರು ತಪ್ಪದೆ ಇಸ್ರಾಯೇಲ್‍ಸಿಂಹಾಸನದ ಮೇಲೆ ಕೂತುಕೊಳ್ಳುವಂತೆ ಮಾಡುವೆನು ಎಂಬದಾಗಿ ವಾಗ್ದಾನ ಮಾಡಿದಿಯಲ್ಲಾ; ಅದನ್ನು ನೆರವೇರಿಸು.
Kannada Bible (KNCL) BSI 2016
ಇಸ್ರಯೇಲ್ ದೇವರಾದ ಸರ್ವೇಶ್ವರಾ, ನೀವು ನನ್ನ ತಂದೆ ದಾವೀದನಿಗೆ, ನಿನ್ನ ಸಂತಾನದವರು ನಿನ್ನಂತೆ ಜಾಗರೂಕತೆಯಿಂದ ನನ್ನ ಮಾರ್ಗದಲ್ಲೇ ನಡೆದುಕೊಳ್ಳುವುದಾದರೆ, ಅವರು ಇಸ್ರಯೇಲ್ ಸಿಂಹಾಸನದ ಮೇಲೆ ಕೂತುಕೊಳ್ಳುವುದು ತಪ್ಪದು; ಎಂಬುದಾಗಿ ವಾಗ್ದಾನಮಾಡಿದ್ದೀರಿ; ಅದನ್ನು ನೆರವೇರಿಸಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದಕಾರಣ, ಈಗ ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ‘ನಿನ್ನ ಸಂತಾನದವರು ನಿನ್ನಂತೆ ಜಾಗ್ರತೆಯಾಗಿದ್ದು, ನನ್ನ ಮಾರ್ಗದಲ್ಲೇ ನಡೆದುಕೊಳ್ಳುವದಾದರೆ, ಅವರು ತಪ್ಪದೆ ಇಸ್ರಾಯೇಲಿನ ಸಿಂಹಾಸನದ ಮೇಲೆ ನನ್ನ ಸಮ್ಮುಖದಲ್ಲಿ ಕುಳಿತುಕೊಳ್ಳುವರು,’ ಎಂದು ನೀವು ನನ್ನ ತಂದೆಯಾದ ನಿಮ್ಮ ಸೇವಕನಾದ ದಾವೀದನಿಗೆ ವಾಗ್ದಾನ ಮಾಡಿದ್ದನ್ನು ನೆರವೇರಿಸಿರಿ.