1 Kings 8:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ದಯವಿಟ್ಟು ನನ್ನ ಪ್ರಾರ್ಥನೆಯನ್ನು ಮತ್ತು ಮನವಿಯನ್ನು ಕೇಳು. ನಾನು ನಿನ್ನ ಸೇವಕ. ಯೆಹೋವನೇ, ನೀನೇ ನನ್ನ ದೇವರು. ಇಂದು ನಿನಗೆ ನಾನು ಮಾಡುತ್ತಿರುವ ಈ ಪ್ರಾರ್ಥನೆಯನ್ನು ಲಾಲಿಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೂ ನನ್ನ ದೇವರೇ, ಯೆಹೋವನೇ, ನಿನ್ನ ಸೇವಕನ ಪ್ರಾರ್ಥನೆಗೂ, ವಿಜ್ಞಾಪನೆಗೂ ಕಿವಿಗೊಡು. ಈ ಹೊತ್ತು ನಿನ್ನನ್ನು ಪ್ರಾರ್ಥಿಸುತ್ತಿರುವ ನಿನ್ನ ಸೇವಕನ ಮೊರೆಯನ್ನು ಲಾಲಿಸು.
Kannada BSI Bible 2016
ಆದರೆ ನನ್ನ ದೇವರಾದ ಕರ್ತನೇ, ನಿನ್ನ ಸೇವಕನ ಪ್ರಾರ್ಥನೆಗೂ ವಿಜ್ಞಾಪನೆಗೂ ನಿನ್ನ ಸೇವಕನು ನಿನ್ನ ಮುಂದೆ ಪ್ರಾರ್ಥಿಸುವ ಪ್ರಾರ್ಥನೆಯ ಕೂಗನ್ನೂ ಕೇಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೂ ನನ್ನ ದೇವರೇ, ಯೆಹೋವನೇ, ನಿನ್ನ ಸೇವಕನ ಪ್ರಾರ್ಥನೆಗೂ ವಿಜ್ಞಾಪನೆಗೂ ಕಿವಿಗೊಡು; ಈಹೊತ್ತು ನಿನ್ನನ್ನು ಪ್ರಾರ್ಥಿಸುತ್ತಿರುವ ನಿನ್ನ ಸೇವಕನ ಮೊರೆಯನ್ನು ಲಾಲಿಸು.
Kannada Bible (KNCL) BSI 2016
ಆದರೂ ನನ್ನ ದೇವರೇ, ಸರ್ವೇಶ್ವರಾ, ನಿಮ್ಮ ದಾಸನ ಪ್ರಾರ್ಥನೆಗೂ ವಿಜ್ಞಾಪನೆಗೂ ಕಿವಿಗೊಡಿ; ಈ ದಿನ ನಿಮ್ಮನ್ನು ಪ್ರಾರ್ಥಿಸುತ್ತಿರುವ ನಿಮ್ಮ ದಾಸನ ಮೊರೆಯನ್ನು ಆಲಿಸಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೂ ನನ್ನ ದೇವರಾದ ಯೆಹೋವ ದೇವರೇ, ನಿಮ್ಮ ಸೇವಕನ ಪ್ರಾರ್ಥನೆಗೂ, ಅವನ ವಿಜ್ಞಾಪನೆಗೂ ತಿರುಗಿಕೊಂಡು, ಇಂದು ನಿಮ್ಮ ಸೇವಕನು ನಿಮ್ಮ ಮುಂದೆ ಪ್ರಾರ್ಥಿಸುವ ಪ್ರಾರ್ಥನೆಯ ಕೂಗನ್ನು ಕೇಳಿರಿ.