1 Kings 8:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನೇ, ನಾನು ಮತ್ತು ಇಸ್ರೇಲಿನ ಜನರೆಲ್ಲರೂ ಈ ಸ್ಥಳದ ಕಡೆಗೆ ತಿರುಗಿ, ನಿನ್ನಲ್ಲಿ ಪ್ರಾರ್ಥಿಸುತ್ತೇವೆ. ದಯವಿಟ್ಟು ಆ ಪ್ರಾರ್ಥನೆಗಳನ್ನು ಲಾಲಿಸು. ನೀನು ಪರಲೋಕದಲ್ಲಿ ವಾಸಿಸುತ್ತಿರುವಿಯೆಂದು ನಮಗೆ ಗೊತ್ತಿದೆ. ನೀನು ನಮ್ಮ ಪ್ರಾರ್ಥನೆಗಳನ್ನು ಅಲ್ಲಿಯೇ ಕೇಳಿ, ನಮಗೆ ಕ್ಷಮೆಯನ್ನು ಅನುಗ್ರಹಿಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಸೇವಕನಾದ ನಾನಾಗಲಿ ನಿನ್ನ ಪ್ರಜೆಗಳಾದ ಇಸ್ರಾಯೇಲರಾಗಲಿ ಈ ಸ್ಥಳದ ಕಡೆಗೆ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸುವುದಾದರೆ, ನಿನ್ನ ನಿವಾಸವಾಗಿರುವ ಪರಲೋಕದಿಂದ ನಮ್ಮ ಬಿನ್ನಹವನ್ನು ಕೇಳಿ, ಕ್ಷಮೆಯನ್ನು ಅನುಗ್ರಹಿಸು.
Kannada BSI Bible 2016
ನಿನ್ನ ಸೇವಕನ ವಿಜ್ಞಾಪನೆಯನ್ನೂ ನಿನ್ನ ಜನರಾದ ಇಸ್ರಾಯೇಲ್ಯರ ವಿಜ್ಞಾಪನೆಯನ್ನೂ ಕೇಳು. ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸುವಾಗ ನೀನು ಆಕಾಶದಲ್ಲಿ ವಾಸಮಾಡುವ ಸ್ಥಳದಲ್ಲಿ ಕೇಳಿ ಮನ್ನಿಸು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಸೇವಕನಾದ ನಾನಾಗಲಿ ನಿನ್ನ ಪ್ರಜೆಗಳಾದ ಇಸ್ರಾಯೇಲ್ಯರಾಗಲಿ ಈ ಸ್ಥಳದ ಕಡೆಗೆ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸುವದಾದರೆ ನಿನ್ನ ನಿವಾಸವಾಗಿರುವ ಪರಲೋಕದಿಂದ ನಮ್ಮ ಬಿನ್ನಹವನ್ನು ಕೇಳಿ ಕ್ಷಮೆಯನ್ನು ಅನುಗ್ರಹಿಸು.
Kannada Bible (KNCL) BSI 2016
ನಿಮ್ಮ ದಾಸನಾದ ನಾನಾಗಲಿ, ನಿಮ್ಮ ಪ್ರಜೆಗಳಾದ ಇಸ್ರಯೇಲರಾಗಲಿ, ಈ ಸ್ಥಳದ ಕಡೆಗೆ ತಿರುಗಿಕೊಂಡು ನಿಮ್ಮನ್ನು ಪ್ರಾರ್ಥಿಸಿದರೆ ನಿಮ್ಮ ನಿವಾಸವಾಗಿರುವ ಪರಲೋಕದಿಂದ ನಮ್ಮ ಬಿನ್ನಹವನ್ನು ಕೇಳಿ, ಕ್ಷಮೆಯನ್ನು ಅನುಗ್ರಹಿಸಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಜನರಾದ ಇಸ್ರಾಯೇಲರ ಮತ್ತು ನಿಮ್ಮ ಸೇವಕನ ವಿಜ್ಞಾಪನೆಯನ್ನೂ ಕೇಳಿರಿ. ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸುವಾಗ, ನೀವು ವಾಸಮಾಡುವ ಸ್ಥಳವಾದ ಪರಲೋಕದಿಂದ ಕೇಳಿ, ಕ್ಷಮೆಯನ್ನು ದಯಪಾಲಿಸಿರಿ.