1 Kings 8:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಒಬ್ಬ ವ್ಯಕ್ತಿಯು ಇನ್ನೊಬ್ಬ ವ್ಯಕ್ತಿಯ ವಿರುದ್ಧ ಏನಾದರೂ ಕೆಟ್ಟದ್ದನ್ನು ಮಾಡಿದರೆ, ಅವನನ್ನು ಈ ಯಜ್ಞವೇದಿಕೆಯ ಬಳಿಗೆ ಕರೆದು ತರುತ್ತಾರೆ. ಆ ವ್ಯಕ್ತಿಯು ತಪ್ಪಿತಸ್ಥನಲ್ಲದಿದ್ದರೆ, ಅವನು ಬಂದು ತಾನು ನಿರಪರಾಧಿಯೆಂದು ಪ್ರಮಾಣ ಮಾಡುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೆರೆಯವನಿಗೆ ವಿರೋಧವಾಗಿ ತಪ್ಪುಮಾಡಿದವನೆಂಬ ಸಂಶಯಕ್ಕೆ ಗುರಿಯಾದ ಮನುಷ್ಯನು ತಾನು ನಿರ್ದೋಷಿಯೆಂದು ಪ್ರಮಾಣಮಾಡಬೇಕಾದಾಗ ಅಂಥವನು ಈ ಆಲಯಕ್ಕೆ ಬಂದು ನಿನ್ನ ಈ ಯಜ್ಞವೇದಿಯ ಮುಂದೆ ನಿಂತು ಪ್ರಮಾಣಮಾಡುವುದಾದರೆ,
Kannada BSI Bible 2016
ಯಾವನಾದರೂ ತನ್ನ ನೆರೆಯವನಿಗೆ ವಿರೋಧ ವಾಗಿ ಪಾಪಮಾಡಲು ಅವನು ಆಣೆ ಇಡಬೇಕೆಂದು ಅವನಿಗೆ ಆಣೆ ನೇಮಿಸಲು ಈ ಮಂದಿರದಲ್ಲಿ ನಿನ್ನ ಬಲಿಪೀಠದ ಮುಂದೆ ಈ ಆಣೆಮಾಡಿದರೆ
Kannada BSI JV (ಕನ್ನಡ ಸತ್ಯವೇದವು J.V. (BSI))
ನೆರೆಯವನಿಗೆ ವಿರೋಧವಾಗಿ ತಪ್ಪುಮಾಡಿದವನೆಂಬ ಸಂಶಯಕ್ಕೆ ಗುರಿಯಾದ ಮನುಷ್ಯನು ತಾನು ನಿರ್ದೋಷಿಯೆಂದು ಪ್ರಮಾಣಮಾಡಬೇಕಾದಾಗ ಅಂಥವನು ಈ ಆಲಯಕ್ಕೆ ಬಂದು ನಿನ್ನ ವೇದಿಯ ಮುಂದೆ ನಿಂತು ಪ್ರಮಾಣಮಾಡುವದಾದರೆ
Kannada Bible (KNCL) BSI 2016
“ನೆರೆಯವನಿಗೆ ವಿರುದ್ಧ ತಪ್ಪುಮಾಡಿದವ ಎಂಬ ಸಂಶಯಕ್ಕೆ ಗುರಿಯಾದ ಒಬ್ಬ ವ್ಯಕ್ತಿ ತಾನು ನಿರ್ದೋಷಿಯೆಂದು ಪ್ರಮಾಣಮಾಡಬೇಕಾದಾಗ, ಅಂಥವನು ಈ ಆಲಯಕ್ಕೆ ಬಂದು, ನಿಮ್ಮ ಪೀಠದ ಮುಂದೆ ನಿಂತು ಪ್ರಮಾಣಮಾಡಿದರೆ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ತನ್ನ ನೆರೆಯವನಿಗೆ ವಿರೋಧವಾಗಿ ತಪ್ಪುಮಾಡಿದವನೆಂಬ ಸಂಶಯಕ್ಕೆ ಗುರಿಯಾದ ಒಬ್ಬ ವ್ಯಕ್ತಿ, ತಾನು ನಿರ್ದೋಷಿಯೆಂದು ಪ್ರಮಾಣಮಾಡಬೇಕಾದಾಗ, ಅಂಥವನು ಈ ಆಲಯಕ್ಕೆ ಬಂದು, ನಿಮ್ಮ ಪೀಠದ ಮುಂದೆ ನಿಂತು ಪ್ರಮಾಣಮಾಡಿದರೆ,