1 Kings 8:32 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪರಲೋಕದಲ್ಲಿರುವ ನೀನು ಅದನ್ನು ಕೇಳಿ, ಆ ವ್ಯಕ್ತಿಗೆ ತೀರ್ಪುನೀಡು. ಆ ವ್ಯಕ್ತಿಯು ತಪ್ಪಿತಸ್ಥನಾಗಿದ್ದರೆ, ಅವನು ತಪ್ಪಿತಸ್ಥನೆಂಬುದನ್ನು ನಮಗೆ ತೋರಿಸು. ಅವನು ನಿರಪರಾಧಿಯಾಗಿದ್ದರೆ ಅವನು ತಪ್ಪಿತಸ್ಥನಲ್ಲವೆಂಬುದನ್ನೂ ದಯವಿಟ್ಟು ನಮಗೆ ತೋರಿಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪರಲೋಕದಲ್ಲಿರುವ ನೀನು ಅದನ್ನು ಕೇಳಿ ನಿನ್ನ ಸೇವಕರ ವ್ಯಾಜ್ಯವನ್ನು ತೀರಿಸು. ದುಷ್ಟನಿಗೆ ಅವನ ದುಷ್ಟತ್ವವನ್ನು ಅವನ ತಲೆಯ ಮೇಲೆಯೇ ಬರಮಾಡಿ, ಅವನು ಅಪರಾಧಿಯೆಂದು ತೋರಿಸು. ನೀತಿವಂತನಿಗೆ ಅವನ ನೀತಿಯ ಫಲವನ್ನು ಅನುಗ್ರಹಿಸಿ ಅವನು ನೀತಿವಂತನೆಂದೂ ತೋರಿಸಿಕೊಡು.
Kannada BSI Bible 2016
ಆಗ ನೀನು ದುಷ್ಟನನ್ನು ದುಷ್ಟನಾಗಮಾಡಿ ಅವನ ಮಾರ್ಗದ ಪ್ರಕಾರ ಅವನ ತಲೆಯ ಮೇಲೆ ಬರಮಾಡುವ ಹಾಗೆಯೂ ನೀತಿವಂತನನ್ನು ನೀತಿವಂತನಾಗ ಮಾಡಿ ಅವನ ನೀತಿಯ ಪ್ರಕಾರ ಅವನಿಗೆ ಕೊಡುವ ಹಾಗೆಯೂ ಪರಲೋಕದಲ್ಲಿರುವ ನೀನು ಕೇಳಿ ನಡಿಸಿ ನಿನ್ನ ಸೇವಕರ ನ್ಯಾಯವನ್ನು ತೀರಿಸು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪರಲೋಕದಲ್ಲಿರುವ ನೀನು ಅದನ್ನು ಕೇಳಿ ನಿನ್ನ ಸೇವಕರ ವ್ಯಾಜ್ಯವನ್ನು ತೀರಿಸು; ದುಷ್ಟನಿಗೆ ಅವನ ದುಷ್ಟತ್ವವನ್ನು ಅವನ ತಲೆಯ ಮೇಲೆಯೇ ಬರಮಾಡಿ ಅವನು ಅಪರಾಧಿಯೆಂದೂ ನೀತಿವಂತನಿಗೆ ಅವನ ನೀತಿಯ ಫಲವನ್ನು ಅನುಗ್ರಹಿಸಿ ಅವನು ನೀತಿವಂತನೆಂದೂ ತೋರಿಸಿಕೊಡು.
Kannada Bible (KNCL) BSI 2016
ಪರಲೋಕದಲ್ಲಿರುವ ನೀವು ಅದನ್ನು ಕೇಳಿ ನಿಮ್ಮ ದಾಸರಾದ ಭಕ್ತರ ವ್ಯಾಜ್ಯವನ್ನು ತೀರಿಸಿರಿ; ದುಷ್ಟನನ್ನು ಖಂಡಿಸಿ ಅವನ ತಪ್ಪನ್ನು ಅವನ ತಲೆಯ ಮೇಲೆಯೇ ಹೊರಿಸಿರಿ; ಅವನು ಅಪರಾಧಿಯೆಂದು ತೋರಿಸಿಕೊಡಿ; ನೀತಿವಂತನಿಗೆ ಅವನ ನೀತಿಯ ಫಲವನ್ನು ಅನುಗ್ರಹಿಸಿ ಅವನು ನೀತಿವಂತನೆಂದು ತೋರಿಸಿಕೊಡಿ..
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವೇ ಆ ಅಪರಾಧಿಯನ್ನು ಖಂಡಿಸಿ ಅವನ ತಪ್ಪನ್ನು ಅವನ ತಲೆಯ ಮೇಲೆಯೇ ಹೊರಿಸಿ, ಅವನು ಅಪರಾಧಿಯೆಂದು ತೋರಿಸಿಕೊಡಿರಿ. ನಿರ್ದೋಷಿಯಾಗಿದ್ದರೆ ಅವನ ನೀತಿಯ ಫಲವನ್ನು ಅನುಗ್ರಹಿಸಿ ಅವನು ನೀತಿವಂತನೆಂದು ತೋರಿಸಿಕೊಡುವ ಹಾಗೆ ಪರಲೋಕದಲ್ಲಿರುವ ನೀವು ಅದನ್ನು ಕೇಳಿ, ನಿಮ್ಮ ಸೇವಕರ ನ್ಯಾಯವನ್ನು ತೀರಿಸಿರಿ.