1 Kings 8:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಇಸ್ರೇಲಿನ ನಿನ್ನ ಜನರೂ ಕೆಲವು ಸಂದರ್ಭಗಳಲ್ಲಿ ನಿನ್ನ ವಿರುದ್ಧವಾಗಿ ಪಾಪಮಾಡುತ್ತಾರೆ. ಅವರನ್ನು ಅವರ ಶತ್ರುಗಳು ಸೋಲಿಸುತ್ತಾರೆ. ಆಗ ಜನರು ನಿನ್ನ ಹತ್ತಿರಕ್ಕೆ ಹಿಂದಿರುಗಿ ನಿನ್ನನ್ನು ಸ್ತುತಿಸುತ್ತಾರೆ. ಈ ಆಲಯದಲ್ಲಿ ಜನರು ನಿನಗೆ ಪ್ರಾರ್ಥಿಸುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ತಮ್ಮ ಪಾಪಗಳ ಫಲವಾಗಿ ಶತ್ರುಗಳಿಂದ ತಗ್ಗಿಸಲ್ಪಟ್ಟ ನಿನ್ನ ಪ್ರಜೆಗಳಾದ ಇಸ್ರಾಯೇಲರು ನಿನ್ನ ಕಡೆಗೆ ತಿರುಗಿಕೊಂಡು ನಿನ್ನ ನಾಮವನ್ನು ಸ್ತುತಿಸಿ ಈ ಆಲಯದಲ್ಲಿ ನಿನಗೆ ವಿಜ್ಞಾಪನೆಯನ್ನು ಮತ್ತು ಪ್ರಾರ್ಥನೆಯನ್ನೂ ಮಾಡುವುದಾದರೆ,
Kannada BSI Bible 2016
ನಿನ್ನ ಜನರಾದ ಇಸ್ರಾಯೇಲ್ಯರು ನಿನಗೆ ವಿರೋಧ ವಾಗಿ ಪಾಪಮಾಡಿದ್ದರಿಂದ ಶತ್ರುವಿನ ಮುಂದೆ ಹೊಡೆ ಯಲ್ಪಟ್ಟು ನಿನ್ನ ಕಡೆಗೆ ತಿರುಗಿಕೊಂಡು ನಿನ್ನ ಹೆಸರನ್ನು ಅರಿಕೆಮಾಡಿ ಪ್ರಾರ್ಥಿಸಿ
Kannada BSI JV (ಕನ್ನಡ ಸತ್ಯವೇದವು J.V. (BSI))
ತಮ್ಮ ಪಾಪಗಳ ಸಲುವಾಗಿ ಶತ್ರುಗಳಿಂದ ತಗ್ಗಿಸಲ್ಪಟ್ಟ ನಿನ್ನ ಪ್ರಜೆಗಳಾದ ಇಸ್ರಾಯೇಲ್ಯರು ನಿನ್ನ ಕಡೆಗೆ ತಿರುಗಿಕೊಂಡು ನಿನ್ನ ನಾಮವನ್ನು ಎತ್ತಿ ಈ ಆಲಯದಲ್ಲಿ ನಿನಗೆ ವಿಜ್ಞಾಪನೆಯನ್ನೂ ಪ್ರಾರ್ಥನೆಯನ್ನೂ ಮಾಡುವದಾದರೆ
Kannada Bible (KNCL) BSI 2016
“ತಮ್ಮ ಪಾಪಗಳ ಸಲುವಾಗಿ ಶತ್ರುಗಳ ಮುಂದೆ ತಲೆತಗ್ಗಿಸಬೇಕಾಗುವ ನಿಮ್ಮ ಪ್ರಜೆಗಳಾದ ಇಸ್ರಯೇಲರು ನಿಮ್ಮ ಕಡೆಗೆ ತಿರುಗಿಕೊಂಡು, ನಿಮ್ಮ ನಾಮವನ್ನು ಎತ್ತಿ ಈ ಆಲಯದಲ್ಲಿ ನಿಮಗೆ ವಿಜ್ಞಾಪನೆಯನ್ನೂ ಪ್ರಾರ್ಥನೆಯನ್ನೂ ಮಾಡಿದರೆ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಿಮ್ಮ ಜನರಾದ ಇಸ್ರಾಯೇಲರು ನಿಮಗೆ ವಿರೋಧವಾಗಿ ಪಾಪಮಾಡಿದ್ದರಿಂದ, ತಮ್ಮ ಶತ್ರುವಿನ ಮುಂದೆ ಪರಾಭವಗೊಂಡು, ನಿಮ್ಮ ಕಡೆಗೆ ತಿರುಗಿಕೊಂಡು, ನಿಮ್ಮ ನಾಮವನ್ನು ಕೊಂಡಾಡಿ, ಈ ಆಲಯದಲ್ಲಿ ನಿಮಗೆ ವಿಜ್ಞಾಪನೆಯನ್ನೂ ಪ್ರಾರ್ಥನೆಯನ್ನೂ ಮಾಡಿದರೆ,