1 Kings 8:34 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪರಲೋಕದಲ್ಲಿಯೇ ಅವರ ಪ್ರಾರ್ಥನೆಗಳನ್ನು ಆಲಿಸಿ ನಿನ್ನ ಜನರಾದ ಇಸ್ರೇಲರ ಪಾಪಗಳನ್ನು ಕ್ಷಮಿಸಿ ಅವರ ದೇಶದಲ್ಲಿ ಅವರು ಮತ್ತೆ ನೆಲೆಸಲು ಅವಕಾಶ ಮಾಡಿಕೊಡು. ಈ ದೇಶವನ್ನು ಅವರ ಪೂರ್ವಿಕರಿಗೆ ದಯಪಾಲಿಸಿದವನು ನೀನೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪರಲೋಕದಲ್ಲಿರುವ ನೀನು ಅದನ್ನು ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ಪೂರ್ವಿಕರಿಗೆ ನೀನು ಕೊಟ್ಟ ದೇಶಕ್ಕೆ ಅವರನ್ನು ಮರಳಿ ಬರುವಂತೆಮಾಡು.
Kannada BSI Bible 2016
ಈ ಮನೆಯಲ್ಲಿ ನಿನಗೆ ವಿಜ್ಞಾಪನೆ ಮಾಡಿದರೆ ಆಗ ನೀನು ಪರಲೋಕದಿಂದ ಕೇಳಿ ನಿನ್ನ ಜನರಾದ ಇಸ್ರಾಯೇಲ್ಯರ ಪಾಪವನ್ನು ಮನ್ನಿಸಿ ನೀನು ಅವರ ತಂದೆಗಳಿಗೆ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪರಲೋಕದಲ್ಲಿರುವ ನೀನು ಲಾಲಿಸಿ ಅವರ ಪಾಪಗಳನ್ನು ಕ್ಷವಿುಸಿ ಅವರ ಪಿತೃಗಳಿಗೆ ನೀನು ಕೊಟ್ಟ ದೇಶಕ್ಕೆ ಅವರನ್ನು ತಿರಿಗಿ ಬರಮಾಡು.
Kannada Bible (KNCL) BSI 2016
ಪರಲೋಕದಲ್ಲಿರುವ ನೀವು ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ಪಿತೃಗಳಿಗೆ ನೀವು ಕೊಟ್ಟ ಈ ನಾಡಿಗೆ ಅವರನ್ನು ಮರಳಿಬರಮಾಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನೀವು ಪರಲೋಕದಿಂದ ಕೇಳಿ, ನಿಮ್ಮ ಜನರಾದ ಇಸ್ರಾಯೇಲರ ಪಾಪವನ್ನು ಮನ್ನಿಸಿ, ನೀವು ಅವರ ತಂದೆಗಳಿಗೆ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡಿರಿ.