1 Kings 8:35 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಅವರು ಕೆಲವು ಸಂದರ್ಭಗಳಲ್ಲಿ ನಿನ್ನ ವಿರುದ್ಧವಾಗಿ ಪಾಪಮಾಡುತ್ತಾರೆ. ಆಗ ನೀನು ಅವರ ಭೂಮಿಯ ಮೇಲೆ ಬೀಳುವ ಮಳೆಯನ್ನು ನಿಲ್ಲಿಸುವೆ. ಆಗ ಅವರು ಈ ಸ್ಥಳದ ಕಡೆಗೆ ತಿರುಗಿ ಪ್ರಾರ್ಥಿಸುತ್ತಾ, ನಿನ್ನ ಹೆಸರನ್ನು ಕೊಂಡಾಡುವರು. ನೀನು ಅವರನ್ನು ಬಳಲಿಸುವೆ. ಅವರು ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಟ್ಟು ಅವುಗಳಿಗೆ ವಿಮುಖರಾಗುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಅವರ ಪಾಪಗಳ ನಿಮಿತ್ತವಾಗಿ ಆಕಾಶವು ಮಳೆಗರೆಯದಂತೆ ಮುಚ್ಚಿಕೊಂಡಾಗ ಅವರು ತಮ್ಮ ಪಾಪಗಳನ್ನು ಬಿಟ್ಟು ತಮ್ಮನ್ನು ತಗ್ಗಿಸಿದವನು ನೀನೇ ಎಂದು ನಿನ್ನ ನಾಮವನ್ನು ಸ್ತುತಿಸಿ ಈ ಆಲಯದ ಕಡೆಗೆ ತಿರುಗಿಕೊಂಡು ಪ್ರಾರ್ಥಿಸುವುದಾದರೆ,
Kannada BSI Bible 2016
ಅವರು ನಿನಗೆ ವಿರೋಧವಾಗಿ ಪಾಪವನ್ನು ಮಾಡಿದ ಕಾರಣ ಆಕಾಶವು ಮುಚ್ಚಲ್ಪಟ್ಟು ಮಳೆ ಇಲ್ಲದಿರುವಾಗ ನೀನು ಅವರನ್ನು ಕುಂದಿಸಿದ್ದರಿಂದ ಅವರು ಈ ಸ್ಥಳದ ಕಡೆಗೆ ಪ್ರಾರ್ಥನೆಮಾಡಿ ನಿನ್ನ ನಾಮವನ್ನು ಅರಿಕೆಮಾಡಿ ತಮ್ಮ ಪಾಪದಿಂದ ತಿರುಗಿ ಕೊಂಡರೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ಪಾಪಗಳ ನಿವಿುತ್ತವಾಗಿ ಆಕಾಶವು ಮಳೆಗರೆಯದಂತೆ ಮುಚ್ಚಿಕೊಂಡಾಗ ಅವರು ತಮ್ಮ ಪಾಪಗಳನ್ನು ಬಿಟ್ಟು ತಮ್ಮನ್ನು ತಗ್ಗಿಸಿದವನು ನೀನೇ ಎಂದು ನಿನ್ನ ನಾಮವನ್ನು ಎತ್ತಿ ಈ ಆಲಯದ ಕಡೆಗೆ ತಿರುಗಿಕೊಂಡು ಪ್ರಾರ್ಥಿಸುವದಾದರೆ
Kannada Bible (KNCL) BSI 2016
“ಅವರ ಪಾಪಗಳ ನಿಮಿತ್ತ ಆಕಾಶವು ಮಳೆಗರೆಯದೆ ತೆರೆ ಮುಚ್ಚಿಕೊಂಡಾಗ, ಅವರು ತಮ್ಮ ಪಾಪಗಳನ್ನು ಬಿಟ್ಟು, ತಮ್ಮನ್ನು ತಗ್ಗಿಸಿದವರು ನೀವೇ ಎಂದು ನಿಮ್ಮ ನಾಮವನ್ನು ಎತ್ತಿ ಈ ಆಲಯದ ಕಡೆಗೆ ತಿರುಗಿಕೊಂಡು ಪ್ರಾರ್ಥಿಸಿದರೆ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅವರು ನಿಮಗೆ ವಿರೋಧವಾಗಿ ಪಾಪವನ್ನು ಮಾಡಿದ್ದರಿಂದ, ನೀವು ಆಕಾಶವನ್ನು ಮಳೆಗರೆಯದಂತೆ ಮುಚ್ಚಿ ಅವರನ್ನು ಕುಂದಿಸಿದಾಗ ಅವರು ತಮ್ಮ ಪಾಪವನ್ನು ಬಿಟ್ಟು ಈ ಸ್ಥಳದ ಕಡೆಗೆ ತಿರುಗಿಕೊಂಡು, ನಿಮ್ಮ ನಾಮವನ್ನು ಕೊಂಡಾಡಿ ಪ್ರಾರ್ಥಿಸಿದರೆ,