1 Kings 8:38 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಈ ಕಾರ್ಯಗಳಲ್ಲಿ ಯಾವುದಾದರೊಂದು ಸಂಭವಿಸಿದಾಗ, ಒಬ್ಬ ಮನುಷ್ಯನು ಮಾತ್ರ ತನ್ನ ಪಾಪಕ್ಕಾಗಿ ಕ್ಷಮೆಯನ್ನು ಯಾಚಿಸಿ ಈ ಆಲಯದ ಕಡೆಗೆ ಕೈಗಳನ್ನೆತ್ತಿ ಪ್ರಾರ್ಥಿಸಿದರೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮನಸ್ಸಾಕ್ಷಿ ಪೀಡಿತರಾದ ಎಲ್ಲಾ ಇಸ್ರಾಯೇಲರಾಗಲಿ, ಅವರಲ್ಲಿ ಒಬ್ಬನಾಗಲಿ ಈ ಆಲಯದ ಕಡೆಗೆ ಕೈಯೆತ್ತಿ ಸ್ತುತಿಸಿ ನಿನಗೆ ಪ್ರಾರ್ಥನೆಯನ್ನೂ, ವಿಜ್ಞಾಪನೆಯನ್ನು ಮಾಡುವುದಾದರೆ,
Kannada BSI Bible 2016
ನಿನ್ನ ಜನರಾದ ಸಮಸ್ತ ಇಸ್ರಾಯೇಲಿನ ಯಾವ ಮನುಷ್ಯ ನಾದರೂ ಯಾವ ಪ್ರಾರ್ಥನೆಯನ್ನಾದರೂ ವಿಜ್ಞಾಪನೆ ಯನ್ನಾದರೂ ಮಾಡಿದರೆ ತನ್ನ ಸ್ವಂತ ಹೃದಯದ ಬಾಧೆಯನ್ನು ತಿಳಿದು
Kannada BSI JV (ಕನ್ನಡ ಸತ್ಯವೇದವು J.V. (BSI))
ವ್ಯಾಧಿಯಿಂದಾಗಲಿ ಬಾಧೆಯುಂಟಾಗುವಲ್ಲಿ ಮನಸ್ಸಾಕ್ಷಿ ಪೀಡಿತರಾದ ಎಲ್ಲಾ ಇಸ್ರಾಯೇಲ್ಯರಾಗಲಿ ಅವರಲ್ಲಿ ಒಬ್ಬನಾಗಲಿ ಈ ಆಲಯದ ಕಡೆಗೆ ಕೈಯೆತ್ತಿ ನಿನಗೆ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಮಾಡುವದಾದರೆ
Kannada Bible (KNCL) BSI 2016
ಮನಸ್ಸಾಕ್ಷಿ ಪೀಡಿತರಾದ ಇಡೀ ಇಸ್ರಯೇಲರಾಗಲಿ, ಅವರಲ್ಲಿ ಒಬ್ಬನಾಗಲಿ, ಈ ಆಲಯದ ಕಡೆಗೆ ಕೈಯೆತ್ತಿ ನಿಮಗೆ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಮಾಡಿದರೆ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಜನರಾದ ಸಮಸ್ತ ಇಸ್ರಾಯೇಲಿನ ಯಾವ ಒಬ್ಬ ಮನುಷ್ಯನಾದರೂ ತನ್ನ ಹೃದಯದ ವೇದನೆಯಿಂದ, ಈ ಮಂದಿರದ ಕಡೆಗೆ ತನ್ನ ಕೈಗಳನ್ನು ಚಾಚಿ, ಯಾವ ಪ್ರಾರ್ಥನೆಯನ್ನಾದರೂ, ವಿಜ್ಞಾಪನೆಯನ್ನಾದರೂ ಮಾಡಿದರೆ,