1 Kings 8:39 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಯವಿಟ್ಟು ಅವನ ಪ್ರಾರ್ಥನೆಯನ್ನು ನಿನ್ನ ನಿವಾಸವಾದ ಪರಲೋಕದಿಂದ ಆಲಿಸಿ, ಜನರನ್ನು ಕ್ಷಮಿಸಿ, ಅವರಿಗೆ ಸಹಾಯ ಮಾಡು. ಜನರು ನಿಜವಾಗಿ ಆಲೋಚಿಸುವ ಸಂಗತಿಗಳು ನಿನಗೆ ಮಾತ್ರ ತಿಳಿದಿವೆ. ಆದ್ದರಿಂದ ಪ್ರತಿಯೊಬ್ಬ ವ್ಯಕ್ತಿಗೂ ತೀರ್ಪುನೀಡು ಮತ್ತು ಅವನಿಗೆ ನ್ಯಾಯವಾದದ್ದನ್ನು ಮಾಡು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮನುಷ್ಯರ ಹೃದಯಗಳನ್ನು ಬಲ್ಲಂಥ ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಲಾಲಿಸಿ, ಅವರಿಗೆ ಪಾಪಪರಿಹಾರವನ್ನು ಅನುಗ್ರಹಿಸು. ನೀನೊಬ್ಬನೇ ಎಲ್ಲಾ ಮನುಷ್ಯರ ಹೃದಯಗಳನ್ನು ಬಲ್ಲವನಾಗಿರುವುದರಿಂದ ಪ್ರತಿಯೊಬ್ಬನಿಗೂ ಅವನವನು ಹಿಡಿಯುವ ಮಾರ್ಗಕ್ಕೆ ತಕ್ಕ ಹಾಗೆ ಫಲವನ್ನು ಕೊಡು.
Kannada BSI Bible 2016
ಈ ಮಂದಿರದ ಕಡೆಗೆ ತನ್ನ ಕೈಗಳನ್ನು ಚಾಚಿದರೆ ಆಗ ನೀನು ನಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಅವರು ಬದುಕಿರುವ ವರೆಗೂ ಅವರು ನಿನಗೆ ಭಯಪಡುವ ಹಾಗೆ,
Kannada BSI JV (ಕನ್ನಡ ಸತ್ಯವೇದವು J.V. (BSI))
ಮನುಷ್ಯರ ಹೃದಯಗಳನ್ನು ಬಲ್ಲಂಥ ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಲಾಲಿಸಿ ಅವರಿಗೆ ಪಾಪಪರಿಹಾರವನ್ನು ಅನುಗ್ರಹಿಸು; ನೀನೊಬ್ಬನೇ ಎಲ್ಲಾ ಮನುಷ್ಯರ ಹೃದಯಗಳನ್ನು ಬಲ್ಲವನಾಗಿರುವದರಿಂದ ಪ್ರತಿಯೊಬ್ಬನಿಗೂ ಅವನವನು ಹಿಡಿಯುವ ಮಾರ್ಗಕ್ಕೆ ತಕ್ಕ ಹಾಗೆ ಫಲವನ್ನು ಕೊಡು.
Kannada Bible (KNCL) BSI 2016
ಮನುಷ್ಯರ ಅಂತರಂಗಗಳನ್ನು ಬಲ್ಲಂಥ ನೀವು, ನಿಮ್ಮ ನಿವಾಸವಾಗಿರುವ ಪರಲೋಕದಿಂದ ಆಲಿಸಿರಿ; ಅವರಿಗೆ ಪಾಪಪರಿಹಾರವನ್ನು ಅನುಗ್ರಹಿಸಿರಿ; ನೀವೊಬ್ಬರೇ ಎಲ್ಲಾ ಮಾನವರ ಹೃದಯಗಳನ್ನು ಬಲ್ಲವನಾಗಿರುವುದರಿಂದ ಪ್ರತಿಯೊಬ್ಬನಿಗೂ ಅವನವನು ಹಿಡಿಯುವ ಮಾರ್ಗಕ್ಕೆ ತಕ್ಕ ಹಾಗೆ ಫಲವನ್ನು ಕೊಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ವಾಸಮಾಡುವ ಪರಲೋಕದಿಂದ ಕೇಳಿ, ಮನ್ನಿಸಿ, ನಡೆಸಿರಿ. ಮನುಷ್ಯನ ಹೃದಯವನ್ನು ತಿಳಿದಿರುವ ನೀವು ಪ್ರತಿ ಮನುಷ್ಯನಿಗೂ ಅವನವನ ಮಾರ್ಗದ ಪ್ರಕಾರ ಪ್ರತಿಫಲಕೊಡಿರಿ. ಏಕೆಂದರೆ ನೀವೊಬ್ಬರೇ ಸಮಸ್ತ ಜನರ ಹೃದಯಗಳನ್ನು ತಿಳಿದವರಾಗಿದ್ದೀರಿ.