1 Kings 8:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು, ಅದರೊಂದಿಗೆ ದೇವದರ್ಶನ ಗುಡಾರವನ್ನು ಮತ್ತು ಗುಡಾರದಲ್ಲಿದ್ದ ಪವಿತ್ರ ವಸ್ತುಗಳನ್ನು ಹೊತ್ತುಕೊಂಡರು. ಈ ವಸ್ತುಗಳನ್ನು ಯಾಜಕರು ಹೊತ್ತುಕೊಳ್ಳಲು ಲೇವಿಯರು ಅವರಿಗೆ ಸಹಾಯ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಉಳಿದ ಯಾಜಕರೂ ಮತ್ತು ಲೇವಿಯರೂ ದೇವದರ್ಶನದ ಗುಡಾರ, ಅದರಲ್ಲಿದ್ದ ಪರಿಶುದ್ಧವಸ್ತು ಇವುಗಳನ್ನು ಹೊತ್ತುಕೊಂಡರು.
Kannada BSI Bible 2016
ಯಾಜಕರೂ ಲೇವಿಯರೂ ಇವುಗಳನ್ನು ತಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಉಳಿದ ಯಾಜಕರೂ ಲೇವಿಯರೂ ದೇವದರ್ಶನದ ಗುಡಾರ, ಅದರಲ್ಲಿದ್ದ ಪರಿಶುದ್ಧವಸ್ತು ಇವುಗಳನ್ನು ಹೊತ್ತರು.
Kannada Bible (KNCL) BSI 2016
ಉಳಿದ ಯಾಜಕರೂ ಲೇವಿಯರೂ ದೇವದರ್ಶನದ ಗುಡಾರ ಹಾಗು ಅದರಲ್ಲಿದ್ದ ಪವಿತ್ರವಸ್ತುಗಳನ್ನು ಹೊತ್ತರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವದರ್ಶನದ ಗುಡಾರವನ್ನೂ, ಗುಡಾರದಲ್ಲಿದ್ದ ಸಮಸ್ತ ಪರಿಶುದ್ಧವಾದ ಸಲಕರಣೆಗಳನ್ನೂ ತಂದರು. ಇವುಗಳನ್ನು ಯಾಜಕರೂ, ಲೇವಿಯರೂ ಹೊತ್ತುಕೊಂಡು ಬಂದರು.