1 Kings 8:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾಜನಾದ ಸೊಲೊಮೋನನು ಮತ್ತು ಇಸ್ರೇಲಿನ ಜನರೆಲ್ಲರೂ ಒಡಂಬಡಿಕೆಯ ಪೆಟ್ಟಿಗೆಯ ಎದುರಿನಲ್ಲಿ ಒಟ್ಟಿಗೆ ಸೇರಿದರು. ಅವರು ಅಸಂಖ್ಯವಾದ ಕುರಿಗಳನ್ನು ಮತ್ತು ದನಗಳನ್ನು ಯಜ್ಞಗಳನ್ನಾಗಿ ಅರ್ಪಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನಾದ ಸೊಲೊಮೋನನು ಅಲ್ಲಿ ಕೂಡಿ ಬಂದಿದ್ದ ಎಲ್ಲಾ ಇಸ್ರಾಯೇಲರೂ ಮಂಜೂಷದ ಮುಂದೆ ಅಸಂಖ್ಯವಾದ ಕುರಿದನಗಳನ್ನು ಯಜ್ಞಮಾಡಿದರು.
Kannada BSI Bible 2016
ಆಗ ಅರಸನಾದ ಸೊಲೊಮೋನನೂ ಅವನ ಬಳಿಗೆ ಕೂಡಿದ ಇಸ್ರಾಯೆಲ್‌ ಸಭೆಯವರೆಲ್ಲರೂ ಮಂಜೂ ಷದ ಮುಂದೆ ನಿಂತು ಹೆಚ್ಚಾದದರಿಂದ ಲೆಕ್ಕಿಸಲಾಗದಷ್ಟು ಕುರಿಗಳನ್ನೂ ಪಶುಗಳನ್ನೂ ಬಲಿಯಾಗಿ ಅರ್ಪಿಸಿ ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನಾದ ಸೊಲೊಮೋನನೂ ಅಲ್ಲಿ ಕೂಡಿಬಂದಿದ್ದ ಎಲ್ಲಾ ಇಸ್ರಾಯೇಲ್ಯರೂ ಮಂಜೂಷದ ಮುಂದೆ ಅಸಂಖ್ಯವಾದ ಕುರಿದನಗಳನ್ನು ಯಜ್ಞಮಾಡಿದರು.
Kannada Bible (KNCL) BSI 2016
ಅರಸ ಸೊಲೊಮೋನನು ಹಾಗು ಅಲ್ಲಿ ಕೂಡಿಬಂದಿದ್ದ ಎಲ್ಲ ಇಸ್ರಯೇಲರೂ ಮಂಜೂಷದ ಮುಂದೇ ಅಸಂಖ್ಯವಾದ ಕುರಿದನಗಳನ್ನು ಬಲಿದಾನಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅರಸನಾದ ಸೊಲೊಮೋನನೂ, ಅವನ ಬಳಿಯಲ್ಲಿ ಕೂಡಿದ ಇಸ್ರಾಯೇಲ್ ಜನರೆಲ್ಲರೂ ಮಂಜೂಷದ ಮುಂದೆ ನಿಂತು ಎಣಿಸಲಾಗದಷ್ಟು ಕುರಿಗಳನ್ನೂ ಪಶುಗಳನ್ನೂ ಬಲಿಯಾಗಿ ಅರ್ಪಿಸಿದರು.