1 Kings 8:52 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರಾದ ಯೆಹೋವನೇ, ನನ್ನ ಪ್ರಾರ್ಥನೆಗಳನ್ನು ಮತ್ತು ಇಸ್ರೇಲಿನ ನಿನ್ನ ಜನರ ಪ್ರಾರ್ಥನೆಗಳನ್ನು ದಯವಿಟ್ಟು ಆಲಿಸು. ಅವರು ಸಹಾಯಕ್ಕಾಗಿ ಯಾವ ಬಳಿಗೆಯಲ್ಲಾದರೂ ನಿನಗೆ ಮೊರೆಯಿಟ್ಟರೆ ಅದನ್ನು ಆಲಿಸು,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಸೇವಕನ ಮೇಲೆಯೂ, ನಿನ್ನ ಪ್ರಜೆಗಳಾದ ಇಸ್ರಾಯೇಲರ ಮೇಲೆಯೂ ಕಟಾಕ್ಷವಿಟ್ಟು ಅವರು ಪ್ರಾರ್ಥಿಸುವಾಗೆಲ್ಲಾ ಅವರ ವಿಜ್ಞಾಪನೆಗಳನ್ನು ಲಾಲಿಸು.
Kannada BSI Bible 2016
ಓ ಕರ್ತನಾದ ದೇವರೇ--ಅವರು ನಿನಗೆ ಕೂಗುವ ಎಲ್ಲಾದರಲ್ಲಿ ನೀನು ಅವರನ್ನು ಕೇಳುವ ಹಾಗೆ ನಿನ್ನ ಸೇವಕನ ವಿಜ್ಞಾಪನೆಗೂ ನಿನ್ನ ಜನವಾದ ಇಸ್ರಾಯೇಲಿನ ವಿಜ್ಞಾಪನೆಗೂ ನಿನ್ನ ಕಣ್ಣುಗಳು ತೆರೆ ದಿರಲಿ,
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಸೇವಕನ ಮೇಲೆಯೂ ಪ್ರಜೆಗಳಾದ ಇಸ್ರಾಯೇಲ್ಯರ ಮೇಲೆಯೂ ಕಟಾಕ್ಷವಿಟ್ಟು ಅವರು ಪ್ರಾರ್ಥಿಸುವಾಗೆಲ್ಲಾ ಅವರ ವಿಜ್ಞಾಪನೆಗಳನ್ನು ಲಾಲಿಸು.
Kannada Bible (KNCL) BSI 2016
“ಹೇ ಸರ್ವೇಶ್ವರಾ, ನಿಮ್ಮ ದಾಸನಾದ ಅರಸನ ಮೇಲೆಯೂ ಪ್ರಜೆಗಳಾದ ಇಸ್ರಯೇಲರ ಮೇಲೆಯೂ ಕಟಾಕ್ಷವಿಟ್ಟು, ಅವರು ಪ್ರಾರ್ಥಿಸುವಾಗೆಲ್ಲಾ, ಅವರ ವಿಜ್ಞಾಪನೆಗಳನ್ನು ಆಲಿಸಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಿಮ್ಮ ಸೇವಕನ ವಿಜ್ಞಾಪನೆಗೂ, ನಿಮ್ಮ ಜನರಾದ ಇಸ್ರಾಯೇಲರ ವಿಜ್ಞಾಪನೆಗೂ ನಿಮ್ಮ ಕಣ್ಣುಗಳು ತೆರೆದಿರಲಿ. ಅವರು ನಿಮ್ಮನ್ನು ಬೇಡಿಕೊಳ್ಳುವಾಗಲೆಲ್ಲಾ ಅವರ ವಿಜ್ಞಾಪನೆಗಳಿಗೆ ಕಿವಿಗೊಡಿರಿ.