1 Kings 8:53 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಭೂಲೋಕದ ಎಲ್ಲಾ ಜನರೊಳಗಿಂದ ಅವರನ್ನು ನೀನು ನಿನ್ನ ವಿಶೇಷವಾದ ಸ್ವಂತ ಜನರೆಂದು ಆರಿಸಿರುವೆ. ಯೆಹೋವನೇ, ನಮ್ಮ ಪೂರ್ವಿಕರನ್ನು ನೀನು ಈಜಿಪ್ಟಿನಿಂದ ಬರಮಾಡಿದಾಗ ನಿನ್ನ ಸೇವಕನಾದ ಮೋಶೆಯ ಮೂಲಕ ಅದನ್ನು ವಾಗ್ದಾನ ಮಾಡಿದೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನೇ, ಯೆಹೋವನೇ, ನೀನು ನಮ್ಮ ಪೂರ್ವಿಕರನ್ನು ಐಗುಪ್ತದೇಶದಿಂದ ಬಿಡಿಸುವಾಗ ಅವರಿಗೆ ನಾನು ನಿಮ್ಮನ್ನು ಎಲ್ಲಾ ಜನಾಂಗಗಳೊಳಗಿಂದ ಪ್ರತ್ಯೇಕಿಸಿ, ಸ್ವಕೀಯಜನರನ್ನಾಗಿ ಮಾಡಿಕೊಂಡಿದ್ದೇನೆಂದು ಮೋಶೆಯ ಮುಖಾಂತರವಾಗಿ ಹೇಳಿದಿಯಲ್ಲವೇ” ಎಂದು ದೇವರನ್ನು ಪ್ರಾರ್ಥಿಸಿದನು.
Kannada BSI Bible 2016
ನೀನು ಐಗುಪ್ತದಿಂದ ನಮ್ಮ ಪಿತೃಗಳನ್ನು ಹೊರಡ ಮಾಡುವಾಗ ನಿನ್ನ ಸೇವಕನಾದ ಮೋಶೆಯ ಮುಖಾಂತರವಾಗಿ ಹೇಳಿದ ಹಾಗೆ ಅವರನ್ನು ನಿನ್ನ ಬಾಧ್ಯತೆಯಾಗಿ ಭೂಮಿಯ ಸಮಸ್ತ ಜನರೊಳಗಿಂದ ಪ್ರತ್ಯೇಕಿಸಿದಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನೇ, ಯೆಹೋವನೇ, ನೀನು ನಮ್ಮ ಪಿತೃಗಳನ್ನು ಐಗುಪ್ತದೇಶದಿಂದ ಬಿಡಿಸುವಾಗ ಅವರಿಗೆ - ನಾನು ನಿಮ್ಮನ್ನು ಎಲ್ಲಾ ಜನಾಂಗಗಳೊಳಗಿಂದ ಪ್ರತ್ಯೇಕಿಸಿ ಸ್ವಕೀಯ ಜನರನ್ನಾಗಿ ಮಾಡಿಕೊಂಡಿದ್ದೇನೆಂದು ಮೋಶೆಯ ಮುಖಾಂತರವಾಗಿ ಹೇಳಿದಿಯಲ್ಲವೇ ಎಂದು ದೇವರನ್ನು ಪ್ರಾರ್ಥಿಸಿದನು.
Kannada Bible (KNCL) BSI 2016
ಹೇ ಸರ್ವೇಶ್ವರಾ, ಸರ್ವೇಶ್ವರಾ, ನೀವು ನಮ್ಮ ಪಿತೃಗಳನ್ನು ಈಜಿಪ್ಟ್ ದೇಶದಿಂದ ಬಿಡಿಸುವಾಗ ಅವರಿಗೆ, ‘ನಾನು ನಿಮ್ಮನ್ನು ಎಲ್ಲಾ ಜನಾಂಗಗಳೊಳಗಿಂದ ಪ್ರತ್ಯೇಕಿಸಿ ಸ್ವಕೀಯ ಜನರನ್ನಾಗಿ ಮಾಡಿಕೊಂಡಿದ್ದೇನೆ’ ಎಂದು ಮೋಶೆಯ ಮುಖಾಂತರ ಹೇಳಿದಿರಲ್ಲವೇ!” ಎಂದು ದೇವರನ್ನು ಪ್ರಾರ್ಥಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಈಜಿಪ್ಟಿನಿಂದ ನಮ್ಮ ಪಿತೃಗಳನ್ನು ಹೊರಗೆ ತಂದಾಗ ನಿಮ್ಮ ಸೇವಕನಾದ ಮೋಶೆಯ ಮುಖಾಂತರವಾಗಿ ಹೇಳಿದ ಹಾಗೆಯೇ ಸಾರ್ವಭೌಮ ಯೆಹೋವ ದೇವರೇ, ಅವರನ್ನು ನಿಮ್ಮ ಬಾಧ್ಯತೆಯಾಗಿ ಭೂಮಿಯ ಸಮಸ್ತ ಜನರೊಳಗಿಂದ ಪ್ರತ್ಯೇಕಿಸಿರಿ,” ಎಂದನು.