1 Kings 8:54 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೊಲೊಮೋನನು ಯಜ್ಞವೇದಿಕೆಯ ಸನ್ನಿಧಿಯಲ್ಲಿ ತನ್ನ ಮೊಣಕಾಲುಗಳನ್ನೂರಿ, ದೇವರಿಗೆ ಪ್ರಾರ್ಥನೆಯನ್ನು ಮಾಡಿದನು. ಸೊಲೊಮೋನನು ತನ್ನ ಕೈಗಳನ್ನು ಪರಲೋಕದತ್ತ ಚಾಚಿ ಪ್ರಾರ್ಥಿಸಿದನು. ಬಳಿಕ ಸೊಲೊಮೋನನು ಪ್ರಾರ್ಥನೆಯನ್ನು ಮುಗಿಸಿ ಎದ್ದುನಿಂತನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೊಲೊಮೋನನು ಆಕಾಶದ ಕಡೆಗೆ ಕೈಯೆತ್ತಿ ಯೆಹೋವನ ಯಜ್ಞವೇದಿಯ ಮುಂದೆ ಮೊಣಕಾಲೂರಿ ಯೆಹೋವನನ್ನು ಪ್ರಾರ್ಥಿಸಿದ ನಂತರ ಎದ್ದು ನಿಂತು
Kannada BSI Bible 2016
ಆಕಾಶದ ಕಡೆಗೆ ಕೈಯೆತ್ತಿ ಕರ್ತನ ಯಜ್ಞವೇದಿಯ ಮುಂದೆ ಮೊಣಕಾಲೂರಿದ್ದ ಸೊಲೊಮೋ ನನು ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಮಾಡಿ ಮುಗಿಸಿದ ನಂತರ ಎದ್ದು ನಿಂತನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕಾಶದ ಕಡೆಗೆ ಕೈಯೆತ್ತಿ ಯೆಹೋವನ ಯಜ್ಞವೇದಿಯ ಮುಂದೆ ಮೊಣಕಾಲೂರಿದ್ದ ಸೊಲೊಮೋನನು ಈ ಪ್ರಕಾರವಾಗಿ ಯೆಹೋವನನ್ನು ಪ್ರಾರ್ಥಿಸಿದ ನಂತರ ಎದ್ದು ನಿಂತು
Kannada Bible (KNCL) BSI 2016
ಆಕಾಶದ ಕಡೆಗೆ ಕೈಯೆತ್ತಿ ಸರ್ವೇಶ್ವರನ ಬಲಿಪೀಠದ ಮುಂದೆ ಮೊಣಕಾಲೂರಿದ್ದ ಸೊಲೊಮೋನನು ಈ ಪ್ರಕಾರ ಸರ್ವೇಶ್ವರನನ್ನು ಪ್ರಾರ್ಥಿಸಿದ ನಂತರ ಎದ್ದು ನಿಂತನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೊಲೊಮೋನನು ಈ ಸಮಸ್ತ ಪ್ರಾರ್ಥನೆಯನ್ನೂ, ವಿಜ್ಞಾಪನೆಯನ್ನೂ ಯೆಹೋವ ದೇವರಿಗೆ ಮಾಡಿ ತೀರಿಸಿದ ತರುವಾಯ, ಅವನು ಯೆಹೋವ ದೇವರ ಬಲಿಪೀಠದ ಮುಂದೆ ಮೊಣಕಾಲೂರಿ, ತನ್ನ ಕೈಗಳನ್ನು ಆಕಾಶಕ್ಕೆ ಚಾಚಿದವನಾಗಿ ಎದ್ದು ನಿಂತನು.