1 Kings 8:63 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೊಲೊಮೋನನು ಇಪ್ಪತ್ತೆರಡು ಸಾವಿರ ಹೋರಿಗಳನ್ನು, ಒಂದು ಲಕ್ಷದ ಇಪ್ಪತ್ತು ಸಾವಿರ ಕುರಿಗಳನ್ನು ಸಮಾಧಾನಯಜ್ಞವನ್ನಾಗಿ ಅರ್ಪಿಸಿದನು. ಹೀಗೆ ರಾಜನು ಮತ್ತು ಇಸ್ರೇಲರು ಆಲಯವನ್ನು ಯೆಹೋವನಿಗೆ ಪ್ರತಿಷ್ಠಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೊಲೊಮೋನನು ಯೆಹೋವನಿಗೋಸ್ಕರ ಮಾಡಿದ ಸಮಾಧಾನಯಜ್ಞಕ್ಕಾಗಿ ವಧಿಸಿದ ಹೋರಿಗಳು ಇಪ್ಪತ್ತೆರಡು ಸಾವಿರ ಮತ್ತು ಕುರಿಗಳು ಲಕ್ಷದ ಇಪ್ಪತ್ತು ಸಾವಿರ, ಈ ಪ್ರಕಾರ ಅರಸನೂ ಎಲ್ಲಾ ಇಸ್ರಾಯೇಲರೂ ಯೆಹೋವನ ಆಲಯವನ್ನು ಪ್ರತಿಷ್ಠೆ ಮಾಡಿದರು.
Kannada BSI Bible 2016
ಸೊಲೊಮೋನನು ಕರ್ತನಿಗೆ ಅರ್ಪಿಸಿದ ಸಮಾ ಧಾನದ ಬಲಿಗಳಿಗೋಸ್ಕರ ಇಪ್ಪತ್ತೆರಡು ಸಾವಿರ ಎತ್ತು ಗಳನ್ನೂ ಲಕ್ಷದ ಇಪ್ಪತ್ತು ಸಾವಿರ ಕುರಿಗಳನ್ನೂ ಅರ್ಪಿಸಿದನು. ಹೀಗೆಯೇ ಅರಸನೂ ಇಸ್ರಾಯೇಲಿನ ಸಮಸ್ತ ಮಕ್ಕಳೂ ಕರ್ತನ ಮಂದಿರವನ್ನು ಪ್ರತಿಷ್ಠೆ ಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೊಲೊಮೋನನು ಯೆಹೋವನಿಗೋಸ್ಕರ ಮಾಡಿದ ಸಮಾಧಾನಯಜ್ಞಕ್ಕಾಗಿ ವಧಿಸಿದ ಹೋರಿಗಳು ಇಪ್ಪತ್ತೆರಡು ಸಾವಿರ; ಕುರಿಗಳು ಲಕ್ಷದ ಇಪ್ಪತ್ತು ಸಾವಿರ. ಈ ಪ್ರಕಾರ ಅರಸನೂ ಎಲ್ಲಾ ಇಸ್ರಾಯೇಲ್ಯರೂ ಯೆಹೋವನ ಆಲಯವನ್ನು ಪ್ರತಿಷ್ಠಿಸಿದರು.
Kannada Bible (KNCL) BSI 2016
ಸೊಲೊಮೋನನು ಸರ್ವೇಶ್ವರನಿಗೆ ಅರ್ಪಿಸಿದ ಶಾಂತಿಸಮಾಧಾನ ಬಲಿಗಾಗಿ ವಧಿಸಿದ ಹೋರಿಗಳು ಇಪ್ಪತ್ತೆರಡು ಸಾವಿರ; ಕುರಿಗಳು ಒಂದು ಲಕ್ಷದ ಇಪ್ಪತ್ತುಸಾವಿರ; ಈ ಪ್ರಕಾರ ಅರಸನೂ ಇಸ್ರಯೇಲರೆಲ್ಲರೂ ಸರ್ವೇಶ್ವರನ ಆಲಯವನ್ನು ಪ್ರತಿಷ್ಠಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದಿನ ಅರಸನು ಯೆಹೋವ ದೇವರ ಆಲಯದ ಮುಂದಿರುವ ಮಧ್ಯದ ಅಂಗಳವನ್ನು ಪ್ರತಿಷ್ಠೆ ಮಾಡಿದನು. ಯೆಹೋವ ದೇವರ ಮುಂದಿರುವ ಕಂಚಿನ ಬಲಿಪೀಠದ ಮೇಲೆ ದಹನಬಲಿಗಳನ್ನೂ, ಧಾನ್ಯ ಸಮರ್ಪಣೆಗಳನ್ನೂ, ಸಮಾಧಾನದ ಬಲಿಗಳ ಕೊಬ್ಬನ್ನೂ ಇಡುವುದಕ್ಕೆ ಸ್ಥಳ ಸಾಲದೆ ಇದ್ದುದರಿಂದ, ಅಲ್ಲಿ ಅವನು ದಹನಬಲಿಗಳನ್ನೂ, ಸಮಾಧಾನದ ಬಲಿಗಳ ಕೊಬ್ಬನ್ನೂ ಅರ್ಪಿಸಿದನು.