1 Kings 8:65 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರಾಜನಾದ ಸೊಲೊಮೋನನು ಮತ್ತು ಇಸ್ರೇಲಿನ ಜನರೆಲ್ಲರು ವಿಶ್ರಾಂತಿ ಹಬ್ಬವನ್ನು ಆಚರಿಸಿದರು. ಉತ್ತರದಲ್ಲಿದ್ದ ಹಮಾತ್ ದಾರಿಯಿಂದ ದಕ್ಷಿಣದ ಈಜಿಪ್ಟಿನ ಗಡಿಯವರೆಗಿನ ಎಲ್ಲ ಇಸ್ರೇಲರು ಅಲ್ಲಿದ್ದರು. ಅವರೆಲ್ಲರೂ ಒಟ್ಟಾಗಿ ಏಳು ದಿನಗಳ ಕಾಲ ಯೆಹೋವನ ಮುಂದೆ ತಿಂದು, ಕುಡಿದು ಆನಂದಿಸಿದರು. ಆಗ ಅವರು ಮತ್ತೆ ಏಳು ದಿನಗಳು ಅಲ್ಲಿಯೇ ಉಳಿದರು. ಅವರು ಒಟ್ಟಿಗೆ ಹದಿನಾಲ್ಕು ದಿನಗಳು ಹಬ್ಬವನ್ನು ಆಚರಿಸಿದರು!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ರೀತಿಯಾಗಿ ಸೊಲೊಮೋನನು ಹಮಾತ್ ಪಟ್ಟಣದ ದಾರಿಯಿಂದ ಐಗುಪ್ತದ ಹಳ್ಳದ ವರೆಗಿರುವ ಪ್ರಾಂತ್ಯಗಳಿಂದ ಮಹಾ ಸಮೂಹವಾಗಿ ಕೂಡಿಬಂದಿದ್ದ ಎಲ್ಲಾ ಇಸ್ರಾಯೇಲರೂ ಎರಡು ವಾರ ಅಂದರೆ ಹದಿನಾಲ್ಕು ದಿನಗಳ ವರೆಗೆ ತಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಹಬ್ಬಮಾಡಿದರು.
Kannada BSI Bible 2016
ಅದೇ ಕಾಲದಲ್ಲಿ ಸೊಲೊಮೋನನೂ ಅವನ ಸಂಗಡ ಹಮಾತಿನ ಪ್ರದೇಶ ಮೊದಲುಗೊಂಡು ಐಗುಪ್ತದ ನದಿಯ ಮಟ್ಟಿಗೂ ಇರುವ ಮಹಾಸಭೆ ಯಾದ ಸಮಸ್ತ ಇಸ್ರಾಯೇಲ್ಯರೂ ನಮ್ಮ ದೇವರಾದ ಕರ್ತನ ಮುಂದೆ ಏಳೇಳು ಹದಿನಾಲ್ಕು ದಿವಸ ಹಬ್ಬವನ್ನು ಮಾಡಿದರು.ಎಂಟನೇ ದಿನದಲ್ಲಿ ಅವನು ಜನರಿಗೆ ಅಪ್ಪಣೆಯನ್ನು ಕೊಟ್ಟನು. ಆಗ ಅವರು ಅರಸನನ್ನು ಆಶೀರ್ವದಿಸಿ ಕರ್ತನು ತನ್ನ ಸೇವಕನಾದ ದಾವೀದನಿ ಗೋಸ್ಕರವೂ ತನ್ನ ಜನರಾದ ಇಸ್ರಾಯೇಲ್ಯರಿಗೋಸ್ಕ ರವೂ ಮಾಡಿದ ಸಮಸ್ತ ಉಪಕಾರದ ನಿಮಿತ್ತ ಸಂತೋಷಪಟ್ಟು ಹೃದಯದಲ್ಲಿ ಆನಂದವುಳ್ಳವರಾಗಿ ತಮ್ಮ ತಮ್ಮ ಡೇರೆಗಳಿಗೆ ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಪ್ರಕಾರ ಸೊಲೊಮೋನನೂ ಹಮಾತಿನ ದಾರಿಯಿಂದ ಐಗುಪ್ತದ ಹಳ್ಳದವರೆಗಿರುವ ಪ್ರಾಂತಗಳಿಂದ ಮಹಾ ಸಮೂಹವಾಗಿ ಕೂಡಿಬಂದಿದ್ದ ಎಲ್ಲಾ ಇಸ್ರಾಯೇಲ್ಯರೂ ಎರಡು ವಾರ ಅಂದರೆ ಹದಿನಾಲ್ಕು ದಿವಸಗಳವರೆಗೆ ನಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಹಬ್ಬಮಾಡಿದರು.
Kannada Bible (KNCL) BSI 2016
ಹೀಗೆ ಸೊಲೊಮೋನನು ಹಬ್ಬವನ್ನು ಆಚರಿಸಿದನು. ಅಂತೆಯೇ ಹಮಾತಿನ ದಾರಿ ಇಂದ ಈಜಿಪ್ಟಿನ ಹಳ್ಳದವರೆಗಿರುವ ಪ್ರಾಂತ್ಯಗಳಿಂದ ಮಹಾಸಮೂಹವಾಗಿ ಕೂಡಿಬಂದಿದ್ದ ಎಲ್ಲ ಇಸ್ರಯೇಲರು ಆಚರಿಸಿದರು; ಎರಡು ವಾರ, ಅಂದರೆ ಹದಿನಾಲ್ಕು ದಿವಸಗಳವರೆಗೆ, ನಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಹಬ್ಬಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಂಟನೆಯ ದಿನದಲ್ಲಿ ಅವನು ಜನರಿಗೆ ಹೋಗುವುದಕ್ಕೆ ಅಪ್ಪಣೆಕೊಡಲು, ಆಗ ಅವರು ಅರಸನನ್ನು ಆಶೀರ್ವದಿಸಿ ಯೆಹೋವ ದೇವರು ತಮ್ಮ ಸೇವಕನಾದ ದಾವೀದನಿಗೂ, ತನ್ನ ಜನರಾದ ಇಸ್ರಾಯೇಲರಿಗೂ ಮಾಡಿದ ಸಮಸ್ತ ಉಪಕಾರದ ನಿಮಿತ್ತ ಅವರು ಹೃದಯದಲ್ಲಿ ಆನಂದಭರಿತರಾಗಿ ಸಂತೋಷಪಡುತ್ತಾ ಅವರವರ ಡೇರೆಗಳಿಗೆ ಹೋದರು.