1 Kings 8:66 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮಾರನೆಯ ದಿನ ಸೊಲೊಮೋನನು ಜನರಿಗೆ ಮನೆಗೆ ಹೋಗುವಂತೆ ಹೇಳಿದನು. ಜನರೆಲ್ಲರು ರಾಜನನ್ನು ಅಭಿನಂದಿಸಿ ತಮ್ಮ ಮನೆಗಳಿಗೆ ಹೋದರು. ಯೆಹೋವನು ತನ್ನ ಸೇವಕನಾದ ದಾವೀದನಿಗೆ ಮತ್ತು ಇಸ್ರೇಲಿನ ಜನರಿಗೆ ಒಳ್ಳೆಯವುಗಳನ್ನು ಮಾಡಿದ್ದರಿಂದ ಅವರು ಸಂತೋಷವಾಗಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಂಟನೆಯ ದಿನ ಜನರಿಗೆ ಹೋಗುವುದಕ್ಕೆ ಅಪ್ಪಣೆಯಾಗಲು ಅವರು ಅರಸನನ್ನು ವಂದಿಸಿ ಯೆಹೋವನು ತನ್ನ ಸೇವಕನಾದ ದಾವೀದನಿಗೂ ತನ್ನ ಪ್ರಜೆಗಳಾದ ಇಸ್ರಾಯೇಲರಿಗೂ ಮಾಡಿದ ಸರ್ವೋಪಕಾರಗಳನ್ನು ನೆನದು ಆನಂದಚಿತ್ತರಾಗಿ, ಹರ್ಷಿಸುತ್ತಾ ತಮ್ಮ ತಮ್ಮ ನಿವಾಸಗಳಿಗೆ ತೆರಳಿದರು.
Kannada BSI Bible 2016
ಎಂಟನೇ ದಿನದಲ್ಲಿ ಅವನು ಜನರಿಗೆ ಅಪ್ಪಣೆಯನ್ನು ಕೊಟ್ಟನು. ಆಗ ಅವರು ಅರಸನನ್ನು ಆಶೀರ್ವದಿಸಿ ಕರ್ತನು ತನ್ನ ಸೇವಕನಾದ ದಾವೀದನಿ ಗೋಸ್ಕರವೂ ತನ್ನ ಜನರಾದ ಇಸ್ರಾಯೇಲ್ಯರಿಗೋಸ್ಕ ರವೂ ಮಾಡಿದ ಸಮಸ್ತ ಉಪಕಾರದ ನಿಮಿತ್ತ ಸಂತೋಷಪಟ್ಟು ಹೃದಯದಲ್ಲಿ ಆನಂದವುಳ್ಳವರಾಗಿ ತಮ್ಮ ತಮ್ಮ ಡೇರೆಗಳಿಗೆ ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಂಟನೆಯ ದಿವಸ ಜನರಿಗೆ ಹೋಗುವದಕ್ಕೆ ಅಪ್ಪಣೆಯಾಗಲು ಅವರು ಅರಸನನ್ನು ವಂದಿಸಿ ಯೆಹೋವನು ತನ್ನ ಸೇವಕನಾದ ದಾವೀದನಿಗೂ ತನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೂ ಮಾಡಿದ ಸರ್ವೋಪಕಾರಗಳನ್ನು ನೆನಸಿ ಆನಂದಚಿತ್ತರಾಗಿ ಹರ್ಷಿಸುತ್ತಾ ತಮ್ಮತಮ್ಮ ನಿವಾಸಗಳಿಗೆ ತೆರಳಿದರು.
Kannada Bible (KNCL) BSI 2016
ಎಂಟನೆಯ ದಿವಸ ಜನರಿಗೆ ಹೋಗುವುದಕ್ಕೆ ಅಪ್ಪಣೆಯಾಯಿತು. ಅವರು ಅರಸನನ್ನು ವಂದಿಸಿ, ಸರ್ವೇಶ್ವರ ತಮ್ಮ ದಾಸ ದಾವೀದನಿಗೂ ತಮ್ಮ ಪ್ರಜೆಗಳಾದ ಇಸ್ರಯೇಲರಿಗೂ ಮಾಡಿದ ಸರ್ವೋಪಕಾರಗಳನ್ನು ಸ್ಮರಿಸಿ, ಆನಂದಚಿತ್ತರಾಗಿ ಹರ್ಷಿಸುತ್ತಾ, ತಮ್ಮ ತಮ್ಮ ನಿವಾಸಗಳಿಗೆ ತೆರಳಿದರು.