1 Kings 9:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೊಲೊಮೋನನು ಬಿಟ್ಟುಕೊಟ್ಟ ಪಟ್ಟಣಗಳನ್ನು ನೋಡುವುದಕ್ಕಾಗಿ ಹೀರಾಮನು ತೂರಿನಿಂದ ಬಂದನು. ಹೀರಾಮನು ಆ ಪಟ್ಟಣಗಳನ್ನು ನೋಡಿದಾಗ ಅವನಿಗೆ ತೃಪ್ತಿಯಾಗಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀರಾಮನು ತೂರಿನಿಂದ ಬಂದು ಆ ಪಟ್ಟಣಗಳನ್ನು ನೋಡಲು ಅವು ಅವನಿಗೆ ಮೆಚ್ಚಿಗೆಯಾಗಲಿಲ್ಲ.
Kannada BSI Bible 2016
ಆಗ ಹೀರಾಮನು ತೂರಿನಿಂದ ಸೊಲೊಮೋನನು ತನಗೆ ಕೊಟ್ಟ ಪಟ್ಟಣಗಳನ್ನು ನೋಡಲು ಬಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀರಾಮನು ತೂರಿನಿಂದ ಬಂದು ಆ ಪಟ್ಟಣಗಳನ್ನು ನೋಡಲು ಅವು ಅವನ ಮನಸ್ಸಿಗೆ ಬರಲಿಲ್ಲ.
Kannada Bible (KNCL) BSI 2016
ಹೀರಾಮನು ಟೈರಿನಿಂದ ಬಂದು ಆ ಪಟ್ಟಣಗಳನ್ನು ನೋಡಿದನು. ಅವು ಅವನ ಮನಸ್ಸಿಗೆ ಹಿಡಿಸಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಹೀರಾಮನು ಟೈರಿನಿಂದ ಸೊಲೊಮೋನನು ತನಗೆ ಕೊಟ್ಟ ಪಟ್ಟಣಗಳನ್ನು ನೋಡಲು ಬಂದನು. ಆದರೆ ಅವು ಅವನಿಗೆ ಮೆಚ್ಚಿಕೆಯಾಗಿರಲಿಲ್ಲ.