1 Kings 9:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾಜನಾದ ಸೊಲೊಮೋನನು ತಾನು ನಿರ್ಮಿಸಿದ್ದ ಆಲಯದ ಮತ್ತು ಅರಮನೆಯ ಕೆಲಸಗಳನ್ನು ಮಾಡಲು ಗುಲಾಮರನ್ನು ಬಲಾತ್ಕರಿಸಿದನು. ರಾಜನಾದ ಸೊಲೊಮೋನನು ಇತರ ಅನೇಕ ಕಟ್ಟಡಗಳ ನಿರ್ಮಾಣಕ್ಕೆ ಬಿಟ್ಟಿಕೆಲಸದವರನ್ನು ಉಪಯೋಗಿಸಿಕೊಂಡನು. ಅವನು ಮಿಲ್ಲೋ ಕೋಟೆಯನ್ನು ನಿರ್ಮಿಸಿದನು; ಜೆರುಸಲೇಮಿನ ಸುತ್ತಲೂ ನಗರದ ಗೋಡೆಯನ್ನು ಕಟ್ಟಿಸಿದನು; ಅಲ್ಲದೆ ಅವನು ಹಾಚೋರ್, ಮೆಗಿದ್ದೋ ಮತ್ತು ಗೆಜೆರ್ ನಗರಗಳನ್ನು ಕಟ್ಟಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೊಲೊಮೋನನ ಬಿಟ್ಟೀ ಕೆಲಸದವರು ಕಟ್ಟಿದವುಗಳು ಯಾವುವೆಂದರೆ, ಯೆಹೋವನ ಆಲಯ, ಅರಮನೆ, ಮಿಲ್ಲೋ ಕೋಟೆ, ಯೆರೂಸಲೇಮಿನ ಪೌಳಿಗೋಡೆ, ಹಾಚೋರ್ ಮೆಗಿದ್ದೋ ಮತ್ತು ಗೆಜೆರ್ ಇವುಗಳೇ.
Kannada BSI Bible 2016
ಅರಸನಾದ ಸೊಲೊಮೋನನು ಬಿಟ್ಟೀ ಆಳುಗ ಳನ್ನು ಕೂಡಿಸಿದ ಕಾರಣವೇನಂದರೆ, ಕರ್ತನ ಮಂದಿರ ವನ್ನೂ ತನ್ನ ಮನೆಯನ್ನೂ ಮಿಲ್ಲೋವನ್ನೂ ಯೆರೂಸ ಲೇಮಿನ ಗೋಡೆಯನ್ನೂ ಹಾಚೋರನ್ನೂ ಮೆಗಿದ್ದೋ ನನ್ನೂ ಗೆಜೆರನ್ನೂ ಕಟ್ಟುವದಕ್ಕೋಸ್ಕರವೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೊಲೊಮೋನನ ಬಿಟ್ಟೀಕೆಲಸದವರು ಕಟ್ಟಿದವುಗಳು ಯಾವವಂದರೆ - ಯೆಹೋವನ ಆಲಯ, ಅರಮನೆ, ವಿುಲ್ಲೋಕೋಟೆ, ಯೆರೂಸಲೇವಿುನ ಪೌಳಿಗೋಡೆ, ಹಾಚೋರ್, ಮೆಗಿದ್ದೋ, ಗೆಜೆರ್ ಇವೇ.
Kannada Bible (KNCL) BSI 2016
ಸರ್ವೇಶ್ವರನ ಆಲಯ, ಅರಮನೆ, ಮಿಲ್ಲೋಕೋಟೆ, ಜೆರುಸಲೇಮಿನ ಪೌಳಿಗೋಡೆ, ಹಾಚೋರ್, ಮೆಗಿದ್ದೋ ಹಾಗು ಗೆಜೆರ್ ಇವುಗಳನ್ನು ಸೊಲೊಮೋನನು ಬಿಟ್ಟೀಕೆಲಸದವರಿಂದ ಕಟ್ಟಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನಾದ ಸೊಲೊಮೋನನು ದಾಸರನ್ನು ಕೂಡಿಸಿದ ಕಾರಣವೇನೆಂದರೆ, ಯೆಹೋವ ದೇವರ ಮಂದಿರವನ್ನೂ, ತನ್ನ ಅರಮನೆಯನ್ನೂ, ಮಿಲ್ಲೋವನ್ನೂ, ಯೆರೂಸಲೇಮಿನ ಗೋಡೆಯನ್ನೂ, ಹಾಚೋರನ್ನೂ, ಮೆಗಿದ್ದೋವನ್ನೂ, ಗೆಜೆರನ್ನೂ ಕಟ್ಟುವುದಕ್ಕೋಸ್ಕರವೇ.