1 Kings 9:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೊಲೊಮೋನನು ಪ್ರತಿವರ್ಷದಲ್ಲೂ ಮೂರು ಸಲ ಸರ್ವಾಂಗಹೋಮಗಳನ್ನು, ಸಮಾಧಾನಯಜ್ಞಗಳನ್ನು ಯಜ್ಞವೇದಿಕೆಯ ಮೇಲೆ ಅರ್ಪಿಸುತ್ತಿದ್ದನು. ಈ ಯಜ್ಞವೇದಿಕೆಯನ್ನು ಸೊಲೊಮೋನನು ಯೆಹೋವನಿಗಾಗಿ ನಿರ್ಮಿಸಿದನು. ರಾಜನಾದ ಸೊಲೊಮೋನನು ಯೆಹೋವನ ಮುಂದೆ ಸುಗಂಧ ಧೂಪವನ್ನು ಸುಡುತ್ತಿದ್ದನು. ಅವನು ಆಲಯಕ್ಕೆ ಬೇಕಾದ ವಸ್ತುಗಳನ್ನು ಕೊಡುತ್ತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೊಲೊಮೋನನು ಯೆಹೋವನ ಆಲಯದ ಮುಂದೆ ತಾನು ಯೆಹೋವನಿಗೋಸ್ಕರ ಕಟ್ಟಿಸಿದ ಯಜ್ಞವೇದಿಯ ಮೇಲೆ ವರ್ಷಕ್ಕೆ ಮೂರು ಸಾರಿ ಸರ್ವಾಂಗಹೋಮ, ಸಮಾಧಾನಯಜ್ಞ ಇವುಗಳನ್ನು ಸಮರ್ಪಿಸಿ ಧೂಪಹಾಕುತ್ತಿದ್ದನು. ಹೀಗೆ ಅವನು ದೇವಾಲಯವನ್ನು ಕಟ್ಟಿ ಸಂಪೂರ್ಣಗೊಳಿಸಿದನು.
Kannada BSI Bible 2016
ವರುಷಕ್ಕೆ ಮೂರು ಸಾರಿ ಸೊಲೊ ಮೋನನು ಕರ್ತನಿಗೆ ತಾನು ಕಟ್ಟಿಸಿದ ಬಲಿಪೀಠದ ಮೇಲೆ ದಹನಬಲಿಗಳನ್ನೂ ಸಮಾಧಾನದ ಬಲಿಗ ಳನ್ನೂ ಅರ್ಪಿಸಿ ಕರ್ತನ ಮುಂದಿರುವ ಪೀಠದ ಮೇಲೆ ಧೂಪವನ್ನು ಸುಟ್ಟನು. ಹೀಗೆಯೇ ಅವನು ಮಂದಿ ರವನ್ನು ಕಟ್ಟಿಸಿ ತೀರಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಂತರ ಸೊಲೊಮೋನನು ವಿುಲ್ಲೋಕೋಟೆಯನ್ನು ಕಟ್ಟಿಸಿದನು. ಸೊಲೊಮೋನನು ಯೆಹೋವನ ಆಲಯದ ಮುಂದೆ ತಾನು ಯೆಹೋವನಿಗೋಸ್ಕರ ಕಟ್ಟಿಸಿದ ಯಜ್ಞವೇದಿಯ ಮೇಲೆ ವರುಷಕ್ಕೆ ಮೂರು ಸಾರಿ ಸರ್ವಾಂಗಹೋಮ, ಸಮಾಧಾನಯಜ್ಞ ಇವುಗಳನ್ನು ಸಮರ್ಪಿಸಿ ಧೂಪಸುಡುತ್ತಿದ್ದನು. ದೇವಾಲಯವನ್ನು ಕಟ್ಟಿಸಿ ತೀರಿಸಿದನು.
Kannada Bible (KNCL) BSI 2016
ಸೊಲೊಮೋನನು ಸರ್ವೇಶ್ವರನ ಆಲಯದ ಮುಂದೆ ಸರ್ವೇಶ್ವರನಿಗಾಗಿ ತಾನು ಕಟ್ಟಿಸಿದ ಬಲಿಪೀಠದ ಮೇಲೆ ವರ್ಷಕ್ಕೆ ಮೂರು ಸಾರಿ ದಹನಬಲಿ ಹಾಗು ಶಾಂತಿಸಮಾಧಾನಬಲಿಗಳನ್ನು ಸಮರ್ಪಿಸಿ ಧೂಪಾರತಿ ಎತ್ತುತ್ತಿದ್ದನು. ಹೀಗೆ ಅವನು ಮಹಾದೇವಾಲಯವನ್ನು ಕಟ್ಟಿಸಿಮುಗಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ವರುಷಕ್ಕೆ ಮೂರು ಸಾರಿ ಸೊಲೊಮೋನನು ಯೆಹೋವ ದೇವರಿಗೆ ತಾನು ಕಟ್ಟಿಸಿದ ಬಲಿಪೀಠದ ಮೇಲೆ ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿ, ಯೆಹೋವ ದೇವರ ಮುಂದಿರುವ ಪೀಠದ ಮೇಲೆ ಧೂಪವನ್ನು ಸುಡುತ್ತಿದ್ದನು. ಹೀಗೆ ಆಲಯದ ಅರ್ಪಣೆಗಳನ್ನು ಪೂರೈಸಿದನು.