1 Kings 9:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆದರೆ ನೀನಾಗಲಿ ನಿನ್ನ ಮಕ್ಕಳಾಗಲಿ ನನ್ನನ್ನು ಅನುಸರಿಸುವುದನ್ನು ನಿಲ್ಲಿಸಿದರೆ, ನನ್ನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ನೀನು ಅನುಸರಿಸದಿದ್ದರೆ, ಅನ್ಯದೇವರುಗಳ ಸೇವೆಯನ್ನಾಗಲಿ ಪೂಜೆಯನ್ನಾಗಲಿ ನೀನು ಮಾಡಿದರೆ, ನಾನು ದಯಪಾಲಿಸಿರುವ ದೇಶವನ್ನು ಬಿಟ್ಟುಹೋಗುವಂತೆ ನಾನು ಇಸ್ರೇಲರನ್ನು ಬಲಾತ್ಕರಿಸುತ್ತೇನೆ. ಅನ್ಯಜನರಿಗೆ ಇಸ್ರೇಲರು ಉದಾಹರಣೆಯಾಗುತ್ತಾರೆ. ಅನ್ಯಜನರು ಇಸ್ರೇಲರನ್ನು ಅಪಹಾಸ್ಯ ಮಾಡುತ್ತಾರೆ. ನಾನು ಈ ಆಲಯವನ್ನು ಪವಿತ್ರವನ್ನಾಗಿಸಿದೆ. ಜನರು ನನ್ನನ್ನು ಗೌರವಿಸುವ ಸ್ಥಳ ಅದಾಗಿದೆ. ಆದರೆ ನೀನು ನನ್ನನ್ನು ಅನುಸರಿಸದೆ ಇದ್ದರೆ, ಆಗ ನಾನದನ್ನು ಧೂಳೀಪಟ ಮಾಡುತ್ತೇನೆ. (Verses 6-7)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ನೀವಾಗಲಿ, ನಿಮ್ಮ ಮಕ್ಕಳಾಗಲಿ, ನನ್ನ ಆಜ್ಞಾವಿಧಿಗಳನ್ನು ಕೈಕೊಳ್ಳದೆ, ನನ್ನನ್ನು ಬಿಟ್ಟು ಅನ್ಯದೇವತೆಗಳನ್ನು ಹಿಂಬಾಲಿಸಿ, ಅವುಗಳಿಗೆ ಕೈಮುಗಿಯುವುದಾದರೆ
Kannada BSI Bible 2016
ನೀವಾದರೂ ನಿಮ್ಮ ಮಕ್ಕಳಾದರೂ ನಾನು ನಿಮ್ಮ ಮುಂದೆ ಇಟ್ಟ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಕೈಕೊಳ್ಳದೆ ನನ್ನ ಕಡೆಯಿಂದ ಹೊರಟುಹೋಗಿ
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ನೀವಾಗಲಿ ನಿಮ್ಮ ಮಕ್ಕಳಾಗಲಿ ನನ್ನ ಆಜ್ಞಾವಿಧಿಗಳನ್ನು ಕೈಕೊಳ್ಳದೆ ನನ್ನನ್ನು ಬಿಟ್ಟು ಅನ್ಯದೇವತೆಗಳನ್ನು ಹಿಂಬಾಲಿಸಿ ಅವುಗಳಿಗೆ ಕೈ ಮುಗಿಯುವದಾದರೆ
Kannada Bible (KNCL) BSI 2016
ಆದರೆ ನೀವಾಗಲಿ, ನಿಮ್ಮ ಮಕ್ಕಳಾಗಲಿ, ನನ್ನ ಆಜ್ಞಾವಿಧಿಗಳನ್ನು ಕೈಗೊಳ್ಳದೆ, ನನ್ನನ್ನು ಬಿಟ್ಟು ಅನ್ಯದೇವತೆಗಳನ್ನು ಹಿಂಬಾಲಿಸಿ, ಅವುಗಳಿಗೆ ಕೈಮುಗಿದರೆ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದರೆ ನೀವಾಗಲಿ, ನಿಮ್ಮ ಮಕ್ಕಳಾಗಲಿ ನಾನು ನಿಮಗೆ ಕೊಟ್ಟಿರುವ ಆಜ್ಞೆಗಳನ್ನೂ, ಕಟ್ಟಳೆಗಳನ್ನೂ ಕೈಗೊಂಡು ನಡೆಯದೆ ನನ್ನಿಂದ ದೂರಹೋಗಿ, ಅನ್ಯದೇವರುಗಳನ್ನು ಸೇವಿಸಿ, ಅವುಗಳಿಗೆ ಅಡ್ಡಬಿದ್ದರೆ,