1 Peter 1:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕ್ರಿಸ್ತನ ಆತ್ಮನು ಅವರಲ್ಲಿದ್ದನು. ಆ ಆತ್ಮನು ಕ್ರಿಸ್ತನಿಗೆ ಸಂಭವಿಸಬಹುದಾದ ಸಂಕಟವನ್ನು ಮತ್ತು ಆ ಸಂಕಟಗಳ ನಂತರ ಬರಲಿದ್ದ ಮಹಿಮೆಯನ್ನು ಕುರಿತು ತಿಳಿಸುತ್ತಿದ್ದನು. ಆ ಪ್ರವಾದಿಗಳು ತಮಗೆ ಆತ್ಮನು ತೋರಿಸುತ್ತಿದ್ದುದನ್ನು ತಿಳಿದುಕೊಳ್ಳಲು ಪ್ರಯತ್ನಿಸಿದರು. ಆ ಸಂಗತಿಗಳು ಯಾವಾಗ ಸಂಭವಿಸುತ್ತವೆ ಹಾಗೂ ಆ ಕಾಲದಲ್ಲಿ ಈ ಲೋಕವು ಹೇಗಿರುತ್ತದೆ ಎಂಬುದನ್ನು ತಿಳಿದುಕೊಳ್ಳಲು ಪ್ರಯತ್ನಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಮಹಿಮೆಯನ್ನೂ ಮುಂದಾಗಿ ತಿಳಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವನೆಂಬುದನ್ನು ಅವರು ಪರಿಶೋಧನೆ ಮಾಡಿದರು.
Kannada BSI Bible 2016
ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಪ್ರಭಾವವನ್ನೂ ಮುಂದಾಗಿ ಸಾಕ್ಷೀಕರಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವ ನೆಂಬದನ್ನು ಅವರು ಪರಿಶೋಧನೆ ಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಪ್ರಭಾವವನ್ನೂ ಮುಂದಾಗಿ ತಿಳಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವನೆಂಬದನ್ನು ಅವರು ಪರಿಶೋಧನೆ ಮಾಡಿದರು.
Kannada Bible (KNCL) BSI 2016
ಕ್ರಿಸ್ತಯೇಸು ಅನುಭವಿಸಬೇಕಾಗಿದ್ದ ಮರಣವನ್ನು, ಯಾತನೆಯನ್ನು ಮತ್ತು ಅನಂತರದ ಪುನರುತ್ಥಾನದ ಮಹಿಮೆಯನ್ನು ಈ ಪ್ರವಾದಿಗಳು ಪ್ರವಾದಿಸುವಾಗ, ತಮ್ಮಲ್ಲಿದ್ದ ಕ್ರಿಸ್ತಾತ್ಮವು ಇದಕ್ಕೆ ಯಾವ ಸಮಯ ಸಂದರ್ಭವನ್ನು ಸೂಚಿಸುತ್ತದೆ ಎಂಬುದನ್ನು ಕಂಡುಹಿಡಿಯಲು ಪ್ರಯತ್ನಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರಲ್ಲಿದ್ದ ಕ್ರಿಸ್ತ ಯೇಸುವಿನ ಆತ್ಮ, ಕ್ರಿಸ್ತ ಯೇಸುವಿಗೆ ಸಂಭವಿಸಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಮಹಿಮೆಗಳನ್ನೂ ಪ್ರವಾದಿಸಿದಾಗ, ಅದರ ಸಮಯ ಸಂದರ್ಭಗಳನ್ನು ಕಂಡುಹಿಡಿಯಲು ಪರಿಶೋಧನೆ ಮಾಡಿದರು.