1 Peter 1:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ನೀವು ನಿಮ್ಮ ಮನಸ್ಸುಗಳನ್ನು ಸೇವೆಗಾಗಿ ಸಿದ್ಧಪಡಿಸಿರಿ. ಅಲ್ಲದೆ ನಿಮ್ಮನ್ನು ಹತೋಟಿಯಲ್ಲಿಟ್ಟುಕೊಂಡಿರಿ. ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರೆಯುವ ಕೃಪಾವರದ ಮೇಲೆಯೇ ನಿಮ್ಮ ನಿರೀಕ್ಷೆಯೆಲ್ಲಾ ಇರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದ್ದರಿಂದ ನೀವು ನಿಮ್ಮ ಮನಸ್ಸನ್ನು ದೃಢಪಡಿಸಿಕೊಂಡು, ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಸಂಪೂರ್ಣವಾಗಿ ಇಡಿರಿ.
Kannada BSI Bible 2016
ಆದದರಿಂದ ನೀವು ಮನಸ್ಸಿನ ನಡುವನ್ನು ಕಟ್ಟಿ ಕೊಂಡು ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷ ನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನೀರಿಕ್ಷೆಯನ್ನು ಅಂತ್ಯದವರೆಗೆ ಇಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ನೀವು ಮನಸ್ಸಿನ ನಡುವನ್ನು ಕಟ್ಟಿಕೊಂಡು ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರಕುವ ಭಾಗ್ಯದ ಮೇಲೆ ನಿಮ್ಮ ನಿರೀಕ್ಷೆಯನ್ನು ಸಂಪೂರ್ಣವಾಗಿ ಇಡಿರಿ.
Kannada Bible (KNCL) BSI 2016
ಆದ್ದರಿಂದ ನೀವು ಸ್ವಸ್ಥಚಿತ್ತರಾಗಿರಿ. ನಿಮ್ಮ ಮನಸ್ಸು ಕಾರ್ಯೋನ್ಮುಖವಾಗಿರಲಿ. ಯೇಸುಕ್ರಿಸ್ತರು ಪ್ರತ್ಯಕ್ಷವಾಗುವಾಗ ನಿಮಗೆ ಲಭಿಸಲಿರುವ ಸೌಭಾಗ್ಯದಲ್ಲಿ ಪೂರ್ಣ ನಿರೀಕ್ಷೆ ಉಳ್ಳವರಾಗಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ, ನೀವು ನಿಮ್ಮ ಮನಸ್ಸನ್ನು ಸಿದ್ಧಮಾಡಿಕೊಂಡು, ಸ್ವಸ್ಥಚಿತ್ತರಾಗಿದ್ದು ಕ್ರಿಸ್ತ ಯೇಸು ಪ್ರತ್ಯಕ್ಷರಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಅಂತ್ಯದವರೆಗೆ ಇಡಿರಿ.