1 Peter 1:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ದೇವರಲ್ಲಿ ಪ್ರಾರ್ಥಿಸುವಾಗ ಆತನನ್ನು ತಂದೆಯೆಂದು ಕರೆಯುತ್ತೀರಿ. ದೇವರು ಪ್ರತಿಯೊಬ್ಬರಿಗೆ ಅವರವರ ಕೆಲಸಕ್ಕೆ ತಕ್ಕಂತೆ ತೀರ್ಪುಕೊಡುವನು. ನೀವು ಈ ಲೋಕದಲ್ಲಿ ಪ್ರವಾಸಿಗಳಾಗಿರುವುದರಿಂದ ದೇವರಿಗೆ ಭಯಪಟ್ಟು ಜೀವಿಸಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರತಿಯೊಬ್ಬನ ನಡತೆಯನ್ನು ನೋಡಿ ಪಕ್ಷಪಾತವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆಯೆಂದು ಕರೆಯುವವರಾಗಿರುವುದರಿಂದ ಈ ಲೋಕದಲ್ಲಿನ ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯಿಂದ ಕಳೆಯಿರಿ.
Kannada BSI Bible 2016
ಪ್ರತಿಯೊಬ್ಬನ ಕೆಲಸವನ್ನು ನೋಡಿ ಪಕ್ಷಪಾತ ವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆ ಯೆಂದು ಬೇಡಿಕೊಳ್ಳುವವರಾಗಿರಲಾಗಿ ನಿಮ್ಮ ಪ್ರವಾಸ ಕಾಲವನ್ನು ಭಯದಿಂದ ಕಳೆಯಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರತಿಯೊಬ್ಬನ ಕೆಲಸವನ್ನು ನೋಡಿ ಪಕ್ಷಪಾತವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆಯೆಂದು ಕರೆಯುವವರಾಗಿರಲಾಗಿ ಈ ಲೋಕದಲ್ಲಿ ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯುಳ್ಳವರಾಗಿ ಕಳೆಯಿರಿ.
Kannada Bible (KNCL) BSI 2016
ನೀವು ದೇವರಿಗೆ ಪ್ರಾರ್ಥನೆಮಾಡುವಾಗ, ಅವರನ್ನು “ತಂದೆಯೇ” ಎಂದು ಸಂಬೋಧಿಸುತ್ತೀರಿ. ಅವರು ಪಕ್ಷಪಾತಿ ಅಲ್ಲ. ಎಲ್ಲರಿಗೂ ಅವರವರ ಕೃತ್ಯಗಳಿಗೆ ತಕ್ಕಂತೆ ನ್ಯಾಯತೀರ್ಪು ನೀಡುವವರು. ಆದ್ದರಿಂದ ನಿಮ್ಮ ಇಹಲೋಕದ ಯಾತ್ರೆಯನ್ನು ಭಯಭಕ್ತಿಯಿಂದ ಸಾಗಿಸಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರತಿಯೊಬ್ಬನ ಕೆಲಸವನ್ನು ಪಕ್ಷಪಾತವಿಲ್ಲದೆ ತೀರ್ಪುಮಾಡುವ ದೇವರನ್ನು ನೀವು ತಂದೆಯೆಂದು ಬೇಡಿಕೊಳ್ಳುವವರಾಗಿದ್ದು ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯಿಂದ ಕಳೆಯಿರಿ.