1 Peter 1:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೊದಲು ನೀವು ನಿರರ್ಥಕವಾದ ರೀತಿಯಲ್ಲಿ ಜೀವಿಸುತ್ತಿದ್ದಿರೆಂಬುದು ನಿಮಗೇ ತಿಳಿದಿದೆ. ನಿಮಗಿಂತಲೂ ಮೊದಲು ಜೀವಿಸಿದ್ದವರಿಂದ ಅಂತಹ ಜೀವಿತವನ್ನು ಕಲಿತುಕೊಂಡಿರಿ. ಆದರೆ ಅದರಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿ ಹೋಗುವ ಬೆಳ್ಳಿಬಂಗಾರಗಳಿಂದಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ಪೂರ್ವಿಕರಿಂದ ಬಂದಿರುವ ವ್ಯರ್ಥವಾದ ಸಂಪ್ರದಾಯಗಳ ನಡವಳಿಕೆಗಳಿಂದ ನಿಮಗೆ ಬಿಡುಗಡೆಯನ್ನುಂಟುಮಾಡಿದ್ದು ಬೆಳ್ಳಿ, ಬಂಗಾರ ಮೊದಲಾದ ನಶಿಸಿಹೋಗುವ ವಸ್ತುಗಳಿಂದಲ್ಲ.
Kannada BSI Bible 2016
ನಿಮ್ಮ ತಂದೆ ಗಳಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿ ಹೋಗುವ ಬೆಳ್ಳಿ ಬಂಗಾರದಿಂದಲ್ಲ;
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ಹಿರಿಯರು ಕಲಿಸಿಕೊಟ್ಟ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ಬೆಳ್ಳಿಬಂಗಾರ ಮೊದಲಾದ ನಶಿಸಿಹೋಗುವ ವಸ್ತುಗಳಿಂದಲ್ಲ,
Kannada Bible (KNCL) BSI 2016
ನಿಮ್ಮ ಪೂರ್ವಜರಿಂದ ಪರಂಪರೆಯಾಗಿ ಬಂದಿರುವ ನಿರರ್ಥಕ ನಡವಳಿಕೆಯಿಂದ ನಿಮ್ಮನ್ನು ಬಿಡುಗಡೆಮಾಡಲು ಕೊಡಲಾದ ಬೆಲೆಯು ಎಂಥದ್ದೆಂದು ನಿಮಗೆ ತಿಳಿದಿದೆ. ಅದು ನಶಿಸಿಹೋಗುವ ಬೆಳ್ಳಿಬಂಗಾರವಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಪೂರ್ವಿಕರಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿಹೋಗುವ ಬೆಳ್ಳಿ, ಬಂಗಾರದಿಂದಲ್ಲ.