1 Peter 1:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ಕ್ರಿಸ್ತನ ಮೂಲಕ ದೇವರನ್ನು ನಂಬಿದ್ದೀರಿ. ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ನಂತರ ದೇವರು ಆತನಿಗೆ ಪ್ರಭಾವವನ್ನು ದಯಪಾಲಿಸಿದನು. ಆದ್ದರಿಂದ ನಿಮ್ಮ ನಂಬಿಕೆ ಮತ್ತು ನಿರೀಕ್ಷೆಗಳು ದೇವರಲ್ಲಿರಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾಗಿದ್ದೀರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿವೆ.
Kannada BSI Bible 2016
ಹೀಗಿರ ಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿರುವಂತೆ ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಪ್ರಭಾವವನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ವಿಶ್ವಾಸವಿಟ್ಟವರಾದಿರಷ್ಟೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಪ್ರಭಾವವನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾದಿರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡವೆ.
Kannada Bible (KNCL) BSI 2016
ಮರಣದಿಂದ ಪುನರುತ್ಥಾನಗೊಳಿಸಿ ಮಹಿಮೆಪಡಿಸಿದ ದೇವರಲ್ಲಿ ನೀವು ವಿಶ್ವಾಸವಿಟ್ಟದ್ದು ಇವರ ಮುಖಾಂತರವೇ. ಹೀಗೆ ನಿಮ್ಮ ವಿಶ್ವಾಸವೂ ನಿರೀಕ್ಷೆಯೂ ದೇವರಲ್ಲೇ ನೆಲೆಗೊಂಡಿವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿ ಅವರಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಕ್ರಿಸ್ತ ಯೇಸುವಿನ ಮೂಲಕ ವಿಶ್ವಾಸವಿಟ್ಟಿದ್ದೀರಿ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿರಲಿ.