1 Peter 1:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ಸತ್ಯಕ್ಕೆ ವಿಧೇಯರಾಗಿರುವುದರ ಮೂಲಕ ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡಿಕೊಂಡಿದ್ದೀರಿ. ಈಗ ನಿಮ್ಮ ಸಹೋದರ ಸಹೋದರಿಯರನ್ನು ನಿಜವಾಗಿಯೂ ಪ್ರೀತಿಸಬಲ್ಲವರಾಗಿದ್ದೀರಿ. ಆದ್ದರಿಂದ ಒಬ್ಬರನ್ನೊಬ್ಬರು ಹೃದಯಪೂರ್ವಕವಾಗಿ ಪ್ರೀತಿಸಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಿಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಪ್ರೀತಿಯುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನೊಬ್ಬರು ಶುದ್ಧಹೃದಯದಿಂದಲೂ, ಯಥಾರ್ಥವಾಗಿಯೂ ಪ್ರೀತಿಸಿರಿ.
Kannada BSI Bible 2016
ನೀವು ಆತ್ಮನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟ ವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರ ಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನ್ನೊಬ್ಬರು ಹೃದಯಪೂರ್ವಕವಾಗಿಯೂ ಯಥಾರ್ಥವಾಗಿಯೂ ಪ್ರೀತಿಸಿರಿ.
Kannada Bible (KNCL) BSI 2016
ಸತ್ಯಕ್ಕೆ ಶರಣಾಗಿ ಆತ್ಮಶುದ್ಧಿಹೊಂದಿರುವ ನೀವು ಸಹೋದರರನ್ನು ನಿಷ್ಕಪಟದಿಂದ ಪ್ರೀತಿಸಬಲ್ಲಿರಿ. ಎಂದೇ, ಒಬ್ಬರನ್ನೊಬ್ಬರು ಹೃತ್ಪೂರ್ವಕವಾಗಿಯೂ ಯಥಾರ್ಥವಾಗಿಯೂ ಪ್ರೀತಿಸಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಕ್ರಿಸ್ತ ಯೇಸುವಿನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡಿದ್ದರಿಂದ ನಿಷ್ಕಪಟವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ.