1 Peter 1:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ಹೊಸದಾಗಿ ಹುಟ್ಟಿದವರಾಗಿದ್ದೀರಿ. ಈ ಹೊಸಜೀವವು ನಾಶವಾಗುವಂಥದ್ದರಿಂದ ಬರದೆ ನಾಶವಾಗದೆ ಇರುವಂಥದ್ದರಿಂದ ಬಂದದ್ದಾಗಿದೆ. ಸಜೀವವೂ ಶಾಶ್ವತವೂ ಆಗಿರುವ ದೇವರ ವಾಕ್ಯದ ಮೂಲಕ ನೀವು ಹೊಸದಾಗಿ ಹುಟ್ಟಿದ್ದೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ ನೀವು ಹೊಸದಾಗಿ ಹುಟ್ಟಿರುವಂಥದ್ದು ನಾಶವಾಗುವ ವಾಕ್ಯದಿಂದದ್ದಲ್ಲ. ಆದರೆ ನಾಶವಾಗದಂಥ ವಾಕ್ಯದಿಂದಲೇ. ಅದು ಸದಾ ಜೀವವುಳ್ಳ ದೇವರವಾಕ್ಯದ ಮೂಲಕ ಉಂಟಾಯಿತು.
Kannada BSI Bible 2016
ೀವು ತಿರಿಗಿ ಹುಟ್ಟಿದವರಾಗಿದ್ದೀರಲ್ಲಾ; ಆ ಜನ್ಮವು ನಾಶವಾಗುವ ಬೀಜದಿಂದ ಉಂಟಾದದ್ದಲ್ಲ. ನಾಶವಾಗದ ಬೀಜ ದಿಂದಲೇ ಉಂಟಾದದ್ದು ಅದು ದೇವರ ಸದಾ ಜೀವವುಳ್ಳ ವಾಕ್ಯದ ಮೂಲಕವಾಗಿ ಉಂಟಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಪುನರ್ಜನ್ಮ ಹೊಂದಿದವರಾಗಿದ್ದೀರಲ್ಲಾ; ಆ ಜನ್ಮವು ನಾಶವಾಗುವ ಬೀಜದಿಂದ ಉಂಟಾದದ್ದಲ್ಲ, ನಾಶವಾಗದ ಬೀಜದಿಂದಲೇ ಉಂಟಾದದ್ದು. ಅದು ದೇವರ ಸದಾಜೀವವುಳ್ಳ ವಾಕ್ಯದ ಮೂಲಕವಾಗಿ ಉಂಟಾಯಿತು.
Kannada Bible (KNCL) BSI 2016
ನೀವು ಸಜೀವವಾದ ಅನಂತ ದೈವವಾಕ್ಯದ ಮೂಲಕ ಹೊಸಜನ್ಮವನ್ನು ಪಡೆದಿದ್ದೀರಿ; ಈ ಜನ್ಮವನ್ನು ನೀವು ಪಡೆದಿರುವುದು ಮರ್ತ್ಯಮಾನವನಿಂದಲ್ಲ, ಅಮರ ದೇವರಿಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ನೀವು ತಿರುಗಿ ಹುಟ್ಟಿದವರಾಗಿದ್ದೀರಲ್ಲಾ! ಆ ಜನ್ಮವು ನಾಶವಾಗುವ ಬೀಜದಿಂದಲ್ಲ. ಆದರೆ ನಾಶವಾಗದಂಥದ್ದರಿಂದ ಸಜೀವವಾದ ಸದಾಕಾಲವಿರುವ ದೇವರ ವಾಕ್ಯದ ಮೂಲಕ ಆಗಿದೆ.