1 Peter 1:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿಮ್ಮ ನಂಬಿಕೆಯು ಪರಿಶುದ್ಧವಾಗಿದೆ ಎಂಬುದನ್ನು ಪ್ರಕಟಿಸಲು ಈ ತೊಂದರೆಗಳು ಸಂಭವಿಸುತ್ತವೆ. ನಿಮ್ಮ ನಂಬಿಕೆಯ ಪರಿಶುದ್ಧತೆಯು ಬಂಗಾರದ ಮೌಲ್ಯಕ್ಕಿಂತಲೂ ಹೆಚ್ಚಿನದಾಗಿದೆ. ಬಂಗಾರವು ನಶಿಸಿಹೋಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟ ಹಾಕಿ ಅದರ ಪರಿಶುದ್ಧತೆಯನ್ನು ಶೋಧಿಸುವರು. ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ, ನಿಮ್ಮ ನಂಬಿಕೆಯ ಪರಿಶುದ್ಧತೆಯು ನಿಮಗೆ ಕೀರ್ತಿ, ಪ್ರಭಾವ ಮತ್ತು ಗೌರವಗಳನ್ನು ತರುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾಶವಾಗುವಂತಹದ್ದೂ, ಬೆಂಕಿಯಿಂದ ಶೋಧಿಸುವಂತಹದ್ದೂ ಆಗಿರುವ ಬಂಗಾರಕ್ಕಿಂತಲೂ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವಂತಹದ್ದಾಗಿದೆ.
Kannada BSI Bible 2016
ಭಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವದುಂಟಷ್ಟೆ. ಭಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವಮಾನ ಗಳನ್ನು ಉಂಟುಮಾಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಂಗಾರವು ನಾಶವಾಗುವಂಥದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟಾಹಾಕಿ ಶೋಧಿಸುವದುಂಟಷ್ಟೆ. ಬಂಗಾರಕ್ಕಿಂತ ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವ ಮಾನಗಳನ್ನು ಉಂಟುಮಾಡುವದು.
Kannada Bible (KNCL) BSI 2016
ಪರಿಶೋಧನೆಗಳು ಬಂದೊದಗುವುದು ನಿಮ್ಮ ವಿಶ್ವಾಸವನ್ನು ಪುಟವಿಡುವುದಕ್ಕಾಗಿಯೇ. ನಶಿಸಿಹೋಗುವ ಬಂಗಾರವೂ ಕೂಡ ಬೆಂಕಿಯಿಂದ ಪರಿಶೋಧಿತವಾಗುತ್ತದೆ. ಬಂಗಾರಕ್ಕಿಂತಲೂ ಬಹು ಅಮೂಲ್ಯವಾದ ನಿಮ್ಮ ವಿಶ್ವಾಸವು ಶೋಧಿತವಾಗಬೇಕು. ಆಗ ಮಾತ್ರ ಯೇಸುಕ್ರಿಸ್ತರು ಪ್ರತ್ಯಕ್ಷವಾಗುವ ದಿನದಂದು ನಿಮಗೆ ಪ್ರಶಂಸೆ, ಪ್ರತಿಷ್ಠೆ ಹಾಗೂ ಪ್ರತಿಭೆ ದೊರಕುತ್ತವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವುದುಂಟಷ್ಟೆ. ಬಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಿಷ್ಕಪಟ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಕ್ರಿಸ್ತ ಯೇಸು ಪ್ರತ್ಯಕ್ಷರಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವುದು.