1 Peter 2:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒಂದು ಕಾಲದಲ್ಲಿ, ನೀವು ದೇವರ ಜನರಾಗಿರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೊದಲು ನೀವು ಪ್ರಜೆಯಾಗಿರಲಿಲ್ಲ. ಈಗಲಾದರೂ ದೇವರ ಸ್ವಕೀಯಪ್ರಜೆಯಾಗಿದ್ದೀರಿ. ಮೊದಲು ನೀವು ಕರುಣೆ ಹೊಂದಿದವರಾಗಿರಲಿಲ್ಲ. ಈಗಲಾದರೂ ಕರುಣೆ ಹೊಂದಿದವರಾಗಿದ್ದೀರಿ.
Kannada BSI Bible 2016
ಮೊದಲು ನೀವು ಪ್ರಜೆಯಾಗಿರಲಿಲ್ಲ, ಈಗ ದೇವರ ಪ್ರಜೆ ಯಾಗಿದ್ದೀರಿ; ಮೊದಲು ಕರುಣೆ ಹೊಂದಿರಲಿಲ್ಲ, ಈಗ ಕರುಣೆ ಹೊಂದಿದವರಾಗಿದ್ದೀರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೊದಲು ನೀವು ಪ್ರಜೆಯಾಗಿರಲಿಲ್ಲ, ಈಗ ದೇವರ ಪ್ರಜೆಯಾಗಿದ್ದೀರಿ; ಮೊದಲು ವಾತ್ಸಲ್ಯ ಹೊಂದಿರಲಿಲ್ಲ, ಈಗ ವಾತ್ಸಲ್ಯ ಹೊಂದಿದವರಾಗಿದ್ದೀರಿ.
Kannada Bible (KNCL) BSI 2016
ಒಮ್ಮೆ ನೀವು ಗಣನೆಗೆ ಬಾರದ ಜನಗಳಾಗಿದ್ದಿರಿ, ಈಗಲಾದರೋ ದೇವಪ್ರಜೆಗಳೇ ಆಗಿದ್ದೀರಿ. ಹಿಂದೊಮ್ಮೆ, ದೇವರ ಕರುಣೆ ಏನೆಂಬುದೇ ನಿಮಗೆ ತಿಳಿದಿರಲಿಲ್ಲ. ಈಗ ಅವರ ಕರುಣೆಯನ್ನು ಸವಿದಿದ್ದೀರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೊದಲು ನೀವು ಪ್ರಜೆಗಳಾಗಿರಲಿಲ್ಲ. ಈಗ ದೇವರ ಪ್ರಜೆಗಳಾಗಿದ್ದೀರಿ. ಮೊದಲು ಕರುಣೆ ಹೊಂದಿರಲಿಲ್ಲ. ಈಗ ಕರುಣೆ ಹೊಂದಿದ್ದೀರಿ.