1 Peter 2:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಂಬಿಕೆಯಿಲ್ಲದ ಜನರು ನಿಮ್ಮ ಸುತ್ತಮುತ್ತಲೆಲ್ಲಾ ವಾಸಿಸುತ್ತಿದ್ದಾರೆ. ನೀವು ತಪ್ಪು ಮಾಡುತ್ತಿರುವಿರೆಂದು ಅವರು ಹೇಳುವ ಸಾಧ್ಯತೆಯಿದೆ. ಆದ್ದರಿಂದ ಒಳ್ಳೆಯವರಾಗಿ ಬಾಳಿರಿ. ನೀವು ಮಾಡುವ ಒಳ್ಳೆಯ ಕಾರ್ಯಗಳನ್ನು ಅವರು ನೋಡುವರು ಮತ್ತು ದೇವರು ಪ್ರತ್ಯಕ್ಷನಾದ ದಿನದಂದು ಆತನನ್ನು ಕೊಂಡಾಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ, ಆಗ ಅವರು ಯಾವ ಸಂಗತಿಗಳನ್ನು ಕುರಿತಾಗಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ಆತನ ಬರೋಣದ ದಿನದಲ್ಲಿ ಅವರು ದೇವರನ್ನು ಕೊಂಡಾಡುವರು.
Kannada BSI Bible 2016
ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ; ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ಸತ್ಕ್ರಿಯೆಗಳನ್ನು ಕಣ್ಣಾರೆಕಂಡು ದರ್ಶಿಸುವ ದಿನದಲ್ಲಿ ದೇವರನ್ನು ಕೊಂಡಾಡುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ; ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಅಕ್ರಮಗಾರರೆಂದು ನಿಂದಿಸುತ್ತಾರೋ ಆ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ವಿಚಾರಣೆಯ ದಿನದಲ್ಲಿ ದೇವರನ್ನು ಕೊಂಡಾಡುವರು.
Kannada Bible (KNCL) BSI 2016
ಅನ್ಯಧರ್ಮೀಯರ ಮಧ್ಯೆ ನಿಮ್ಮ ನಡತೆ ಆದರ್ಶಪ್ರಾಯವಾಗಿರಲಿ. ಅವರು ನಿಮ್ಮನ್ನು ದುಷ್ಕರ್ಮಿಗಳೆಂದು ದೂಷಿಸಿದರೂ ನಿಮ್ಮ ಸತ್ಕಾರ್ಯಗಳನ್ನು ಮೆಚ್ಚಿಕೊಂಡು ಕ್ರಿಸ್ತಯೇಸುವಿನ ಪುನರಾಗಮನದ ದಿನದಂದು ದೇವರನ್ನು ಕೊಂಡಾಡುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ನಡವಳಿಕೆಯು ಯೆಹೂದ್ಯರಲ್ಲದವರ ನಡುವೆ ಯೋಗ್ಯವಾಗಿರಲಿ, ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ, ಆ ನಿಮ್ಮ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ಕರ್ತ ಯೇಸು ನಮ್ಮನ್ನು ದರ್ಶಿಸುವ ದಿನದಲ್ಲಿ ಅವರು ದೇವರನ್ನು ಕೊಂಡಾಡುವರು.