1 Peter 2:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾಜನು ಕಳುಹಿಸುವ ಅಧಿಕಾರಿಗಳಿಗೆ ವಿಧೇಯರಾಗಿರಿ. ತಪ್ಪು ಮಾಡಿದವರನ್ನು ದಂಡಿಸಲೂ ಒಳ್ಳೆಯದನ್ನು ಮಾಡಿದವರನ್ನು ಹೊಗಳಲೂ ಅವರನ್ನು ಕಳುಹಿಸಲಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಥವಾ ಅರಸನಿಂದ ಕೆಟ್ಟ ನಡತೆಯುಳ್ಳವರನ್ನು ದಂಡಿಸುವುದಕ್ಕೂ ಒಳ್ಳೆ ನಡತೆಯುಳ್ಳವರನ್ನು ಪ್ರೋತ್ಸಾಹಪಡಿಸುವುದಕ್ಕೂ ಕಳುಹಿಸಲ್ಪಟ್ಟಂಥ ಅಧಿಪತಿಗಳಿಗಾಗಲಿ ನೀವು ಅಧೀನರಾಗಿರಿ.
Kannada BSI Bible 2016
ಅಧಿಪತಿಗಳು ಕೆಟ್ಟವರನ್ನು ದಂಡಿಸು ವದಕ್ಕೂ ಒಳ್ಳೆಯವರನ್ನು ಪ್ರೋತ್ಸಾಹಪಡಿಸುವದಕ್ಕೂ (ಅರಸನಿಂದ) ಅವರು ಕಳುಹಿಸಲ್ಪಟ್ಟವರೆಂತಲೂ ತಿಳಿದು ಅವರಿಗೆ ಅಧೀನರಾಗಿರ್ರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನು ಸರ್ವಾಧಿಕಾರಿ ಎಂತಲೂ ಬೇರೆ ಅಧಿಪತಿಗಳು ಕೆಟ್ಟನಡತೆಯುಳ್ಳವರನ್ನು ದಂಡಿಸುವದಕ್ಕೂ ಒಳ್ಳೇ ನಡತೆಯುಳ್ಳವರನ್ನು ಪ್ರೋತ್ಸಾಹಪಡಿಸುವದಕ್ಕೂ ಅರಸನಿಂದ ಕಳುಹಿಸಲ್ಪಟ್ಟವರೆಂತಲೂ ತಿಳಿದು ಅವರಿಗೆ ಅಧೀನರಾಗಿರಿ.
Kannada Bible (KNCL) BSI 2016
ದುಷ್ಟರನ್ನು ಶಿಕ್ಷಿಸುವುದಕ್ಕೂ ಶಿಷ್ಟರನ್ನು ಪ್ರಶಂಸಿಸುವುದಕ್ಕೂ ಆತನಿಂದ ನೇಮಿತವಾಗಿರುವ ರಾಜ್ಯಪಾಲರಿಗೂ ಅಧೀನರಾಗಿ ಬಾಳಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರಾಜ್ಯಪಾಲರು ಕೆಟ್ಟವರನ್ನು ದಂಡಿಸುವುದಕ್ಕೆ ಒಳ್ಳೆಯವರನ್ನು ಪ್ರೋತ್ಸಾಹಪಡಿಸುವುದಕ್ಕೆ ಅರಸನಿಂದ ಅವರು ಕಳುಹಿಸಲಾದವರೆಂದೂ ತಿಳಿದು ಅವರಿಗೆ ಅಧೀನರಾಗಿರಿ.