1 Peter 2:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೇವಕರೇ, ನಿಮ್ಮ ಒಡೆಯರ ಅಧಿಕಾರವನ್ನು ಒಪ್ಪಿಕೊಳ್ಳಿರಿ. ಇದನ್ನು ತುಂಬಾ ಗೌರವದಿಂದ ಮಾಡಿರಿ. ಒಳ್ಳೆಯವರಾದ ಮತ್ತು ದಯಾಪರರಾದ ಒಡೆಯರಿಗೆ ನೀವು ವಿಧೇಯರಾಗಿರಬೇಕು ಮತ್ತು ಕೆಟ್ಟವರಾದ ಒಡೆಯರಿಗೂ ವಿಧೇಯರಾಗಿರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೇವಕರೇ, ನಿಮ್ಮ ಯಜಮಾನರಿಗೆ ಪೂರ್ಣ ಗೌರವದಿಂದ ಅಧೀನರಾಗಿರಿ. ಒಳ್ಳೆಯವರೂ ಸಾತ್ವಿಕರೂ ಆಗಿರುವವರಿಗೆ ಮಾತ್ರವಲ್ಲದೆ ವಕ್ರಬುದ್ಧಿಯುಳ್ಳವರಿಗೂ ವಿಧೇಯರಾಗಿರಿ.
Kannada BSI Bible 2016
ಸೇವಕರೇ, ನಿಮ್ಮ ಯಜಮಾನರಿಗೆ ಪೂರ್ಣ ಭಯದಿಂದ ಅಧೀನ ರಾಗಿರ್ರಿ. ಒಳ್ಳೆಯವರೂ ಸಾತ್ವಿಕರೂ ಆಗಿರುವವರಿಗೆ ಮಾತ್ರವಲ್ಲದೆ ವಕ್ರಬುದ್ಧಿಯುಳ್ಳವರಿಗೂ ವಿಧೇಯ ರಾಗಿರ್ರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೇವಕರೇ, ನಿಮ್ಮ ಯಜಮಾನರಿಗೆ ಪೂರ್ಣಭಯದಿಂದ ಅಧೀನರಾಗಿರಿ. ಒಳ್ಳೆಯವರೂ ಸಾತ್ವಿಕರೂ ಆಗಿರುವವರಿಗೆ ಮಾತ್ರವಲ್ಲದೆ ವಕ್ರಬುದ್ಧಿಯುಳ್ಳವರಿಗೂ ವಿಧೇಯರಾಗಿರಿ.
Kannada Bible (KNCL) BSI 2016
ಕೆಲಸಗಾರರೇ, ನಿಮ್ಮ ಮೇಲಿನ ಅಧಿಕಾರಿಗಳಿಗೆ ಅಧೀನರಾಗಿರಿ. ಅವರಿಗೆ ಪೂರ್ಣಮರ್ಯಾದೆಯನ್ನು ತೋರಿಸಿರಿ. ದಯಾವಂತರೂ ಹಿತಚಿಂತಕರೂ ಆಗಿರುವ ಅಧಿಕಾರಿಗಳಿಗೆ ಮಾತ್ರವಲ್ಲ, ಕಠಿಣವಾಗಿ ವರ್ತಿಸುವವರಿಗೂ ವಿಧೇಯರಾಗಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾಸರೇ, ಯಜಮಾನರಿಗೆ ಅಧೀನರಾಗಿರಿ. ನೀವು ಅವರಲ್ಲಿ ಒಳ್ಳೆಯ ಯಜಮಾನರಿಗೆ ಮಾತ್ರವಲ್ಲ, ಕ್ರೂರ ಯಜಮಾನರಿಗೂ ಪೂರ್ಣಭಯಭಕ್ತಿಯಿಂದ ಅಧೀನರಾಗಿರಿ.