1 Peter 2:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನಿಮ್ಮ ತಪ್ಪಿಗಾಗಿ ನೀವು ದಂಡಿಸಲ್ಪಟ್ಟರೆ ಆ ದಂಡನೆಯನ್ನು ನೀವು ಅನುಭವಿಸಿದ್ದಕ್ಕೆ ನಿಮಗೇನೂ ಕೀರ್ತಿ ಬರುವುದಿಲ್ಲ. ಆದರೆ ನೀವು ಒಳ್ಳೆಯದನ್ನು ಮಾಡಿದ್ದರಿಂದ ಸಂಕಟಕ್ಕೆ ಒಳಗಾಗಿ ಅದನ್ನು ತಾಳ್ಮೆಯಿಂದ ಸಹಿಸಿಕೊಂಡರೆ ಅದು ದೇವರನ್ನು ಸಂತೋಷ ಪಡಿಸುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಪ್ಪುಮಾಡಿ ಗುದ್ದು ತಿನ್ನುವುದರಲ್ಲಿ ನೀವು ಸಹಿಸಿಕೊಂಡರೆ ಅದರಿಂದೇನು ಕೀರ್ತಿ? ಆದರೆ ಒಳ್ಳೆಯದನ್ನು ಮಾಡಿ ಬಾಧೆಪಡುವುದರಲ್ಲಿ ನೀವು ಸಹಿಸಿಕೊಂಡರೆ ಅದು ದೇವರ ಮುಂದೆ ಶ್ಲಾಘ್ಯವಾಗಿದೆ.
Kannada BSI Bible 2016
ತಪ್ಪುಮಾಡಿ ಗುದ್ದು ತಿನ್ನುವದರಲ್ಲಿ ನೀವು ತಾಳ್ಮೆ ಯಿಂದಿದ್ದರೆ ಅದರಿಂದೇನು ಹೆಚ್ಚಳ? ಆದರೆ ಒಳ್ಳೇ ದನ್ನು ಮಾಡಿ ಬಾಧೆಪಡುವದರಲ್ಲಿ ನೀವು ತಾಳ್ಮೆಯಿಂದಿ ದ್ದರೆ ಇದು ದೇವರಿಗೆ ಅಂಗೀಕೃತವಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ತಪ್ಪುಮಾಡಿ ಗುದ್ದು ತಿನ್ನುವದರಲ್ಲಿ ನೀವು ತಾಳ್ಮೆಯಿಂದಿದ್ದರೆ ಅದರಿಂದೇನು ಕೀರ್ತಿ? ಆದರೆ ಒಳ್ಳೇದನ್ನು ಮಾಡಿ ಬಾಧೆಪಡುವದರಲ್ಲಿ ನೀವು ತಾಳ್ಮೆಯಿಂದಿದ್ದರೆ ಅದು ದೇವರ ಮುಂದೆ ಶ್ಲಾಘ್ಯವಾಗಿದೆ.
Kannada Bible (KNCL) BSI 2016
ನೀವು ತಪ್ಪುಮಾಡಿ, ಶಿಕ್ಷೆಗೆ ಗುರಿಯಾದಾಗ ತಾಳ್ಮೆಯಿಂದಿದ್ದರೆ ಅದೇನೂ ದೊಡ್ಡ ಕಾರ್ಯವಲ್ಲ. ಆದರೆ ಒಳ್ಳೆಯದನ್ನು ಮಾಡಿಯೂ ಬರುವ ಹಿಂಸೆಬಾಧೆಗಳನ್ನು ತಾಳ್ಮೆಯಿಂದ ಸಹಿಸಿಕೊಂಡರೆ, ದೇವರು ನಿಮ್ಮನ್ನು ಮೆಚ್ಚುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತಪ್ಪುಮಾಡಿ ಶಿಕ್ಷೆ ಹೊಂದುವುದರಲ್ಲಿ ನೀವು ತಾಳ್ಮೆಯಿಂದಿದ್ದರೆ ಅದರಿಂದೇನು ಹೆಚ್ಚಳ? ಆದರೆ ಒಳ್ಳೆಯದನ್ನು ಮಾಡಿ ಬಾಧೆಪಡುವುದರಲ್ಲಿ ನೀವು ತಾಳ್ಮೆಯಿಂದಿದ್ದರೆ ಇದು ದೇವರಿಗೆ ಮೆಚ್ಚುಗೆಯಾಗಿದೆ.