1 Peter 2:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದಕ್ಕಾಗಿಯೇ ನಿಮ್ಮನ್ನು ಕರೆಯಲಾಯಿತು. ನೀವು ಅನುಸರಿಸತಕ್ಕ ಮಾದರಿಯು ಕ್ರಿಸ್ತನೇ ಆಗಿದ್ದಾನೆ. ಆತನು ಮಾಡಿದಂತೆ ನೀವೂ ಮಾಡಿರಿ. ನೀವು ಸಂಕಟವನ್ನು ಅನುಭವಿಸುವಾಗ ತಾಳ್ಮೆಯಿಂದಿರಬೇಕು, ಏಕೆಂದರೆ ಕ್ರಿಸ್ತನು ನಿಮಗಾಗಿ ಸಂಕಟಪಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಕ್ಕಾಗಿಯೇ ನೀವು ಕರೆಯಲ್ಪಟ್ಟಿದ್ದೀರಿ. ಕ್ರಿಸ್ತನು ಸಹ ನಿಮಗೋಸ್ಕರ ಬಾಧೆಯನ್ನನುಭವಿಸಿ ನೀವು ಆತನ ಹೆಜ್ಜೆಯ ಜಾಡಿಲ್ಲಿ ನಡೆಯಬೇಕೆಂದು ಮಾದರಿಯನ್ನು ತೋರಿಸಿ ಹೋದನು.
Kannada BSI Bible 2016
ಇದ ಕ್ಕಾಗಿಯೇ ನೀವು ಕರೆಯಲ್ಪಟ್ಟಿರಿ; ಕ್ರಿಸ್ತನು ಸಹ ನಮಗೋಸ್ಕರ ಬಾಧೆಯನ್ನನುಭವಿಸಿ ನೀವು ತನ್ನ ಹೆಜ್ಜೆಯ ಜಾಡಿನಲ್ಲಿ ನಡೆಯಬೇಕೆಂದು ನಮಗೆ ಮಾದರಿಯನ್ನು ಬಿಟ್ಟು ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಕ್ಕಾಗಿಯೇ ನೀವು ಕರೆಯಲ್ಪಟ್ಟಿರಿ; ಕ್ರಿಸ್ತನು ಸಹ ನಿಮಗೋಸ್ಕರ ಬಾಧೆಯನ್ನನುಭವಿಸಿ ನೀವು ತನ್ನ ಹೆಜ್ಜೆಯ ಜಾಡಿನಲ್ಲಿ ನಡೆಯಬೇಕೆಂದು ಮಾದರಿಯನ್ನು ತೋರಿಸಿಹೋದನು.
Kannada Bible (KNCL) BSI 2016
ನೀವು ಹೀಗೆ ಜೀವಿಸಬೇಕೆಂದೇ ದೇವರು ನಿಮ್ಮನ್ನು ಕರೆದಿದ್ದಾರೆ. ಕ್ರಿಸ್ತಯೇಸು ಸಹ ನಿಮಗಾಗಿ ಹಿಂಸೆಬಾಧೆಯನ್ನು ಅನುಭವಿಸಿದರು; ತಮ್ಮ ಹೆಜ್ಜೆಯ ಜಾಡನ್ನೇ ನೀವು ಅನುಸರಿಸುವಂತೆ ನಿಮಗೊಂದು ಆದರ್ಶವನ್ನು ಬಿಟ್ಟುಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಕ್ಕಾಗಿಯೇ ನಿಮ್ಮನ್ನು ಕರೆಯಲಾಯಿತು: ಕ್ರಿಸ್ತ ಯೇಸು ಸಹ ನಮಗೋಸ್ಕರ ಬಾಧೆಯನ್ನು ಅನುಭವಿಸಿ ತಮ್ಮ ಹೆಜ್ಜೆಯ ಜಾಡಿನಲ್ಲಿ ನೀವು ನಡೆಯಬೇಕೆಂದು ಆದರ್ಶವನ್ನು ಬಿಟ್ಟುಹೋದರು.