1 Peter 2:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರು ಕ್ರಿಸ್ತನನ್ನು ಬಯ್ದರೂ ಆತನು ಅವರನ್ನು ಬಯ್ಯಲಿಲ್ಲ. ಆತನು ಸಂಕಟವನ್ನು ಅನುಭವಿಸಿದರೂ ಜನರನ್ನು ಹೆದರಿಸಲಿಲ್ಲ. ಆತನು ತನ್ನ ಕಾರ್ಯವನ್ನು ದೇವರಿಗೆ ವಹಿಸಿದನು. ಸರಿಯಾದ ನ್ಯಾಯತೀರ್ಪು ನೀಡುವಾತನು ದೇವರೊಬ್ಬನೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಯ್ಯುವವರನ್ನು ಆತನು ಪ್ರತಿಯಾಗಿ ಬಯ್ಯಲಿಲ್ಲ, ಆತನು ಬಾಧೆಯನ್ನನುಭವಿಸಿದಾಗ ಯಾರನ್ನೂ ಬೆದರಿಸದೆ, ನ್ಯಾಯವಾಗಿ ತೀರ್ಪು ಮಾಡುವಾತನಿಗೆ ತನ್ನ ಕಾರ್ಯವನ್ನು ಒಪ್ಪಿಸಿದನು.
Kannada BSI Bible 2016
ಬೈಯುವವರನ್ನು ಆತನು ಪ್ರತಿಯಾಗಿ ಬೈಯಲಿಲ್ಲ; ಆತನು ಬಾಧೆಯನ್ನನು ಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವಾತನಿಗೆ ತನ್ನನ್ನು ಒಪ್ಪಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಬಾಧೆಯನ್ನನುಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವಾತನಿಗೆ ತನ್ನ ಕಾರ್ಯವನ್ನು ಒಪ್ಪಿಸಿದನು.
Kannada Bible (KNCL) BSI 2016
ಅವರು, ಅವಮಾನಪಡಿಸಿದವರನ್ನು ಪ್ರತಿಯಾಗಿ ಅವಮಾನಪಡಿಸಲಿಲ್ಲ. ಅವರು ಯಾತನೆಯನ್ನು ಅನುಭವಿಸುವಾಗಲೂ ಯಾರಿಗೂ ಬೆದರಿಕೆ ಹಾಕಲಿಲ್ಲ. ಬದಲಿಗೆ, ಸತ್ಯಸ್ವರೂಪರೂ ನ್ಯಾಯಾಧಿಪತಿಯೂ ಆದ ದೇವರಿಗೆ ತಮ್ಮನ್ನೇ ಒಪ್ಪಿಸಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೈಯ್ಯುವವರನ್ನು ಅವರು ಪ್ರತಿಯಾಗಿ ಬೈಯಲಿಲ್ಲ. ಅವರು ಬಾಧೆಯನ್ನನುಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವ ತಂದೆಗೆ ತಮ್ಮನ್ನು ಒಪ್ಪಿಸಿದರು.