1 Peter 2:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ದಾರಿ ತಪ್ಪಿದ ಕುರಿಗಳಾಗಿದ್ದಿರಿ. ಆದರೆ ಈಗ ನೀವು ನಿಮ್ಮ ಕುರುಬನ ಬಳಿಗೆ ಅಂದರೆ ನಿಮ್ಮ ಆತ್ಮಗಳನ್ನು ಕಾಪಾಡುವಾತನ ಬಳಿಗೆ ಹಿಂತಿರುಗಿ ಬಂದಿರುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ದಾರಿತಪ್ಪಿದ ಕುರಿಗಳಂತೆ ಇದ್ದವರು. ಆದರೆ ಈಗ ನೀವು ತಿರುಗಿಕೊಂಡು ನಿಮ್ಮ ಆತ್ಮಗಳ ಕುರುಬನೂ ಪಾಲಕನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
Kannada BSI Bible 2016
ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಕುರಿಗಳಂತೆ ದಾರಿತಪ್ಪಿ ತೊಳಲುವವರಾಗಿದ್ದಿರಿ, ಆದರೆ ಈಗ ನೀವು ತಿರುಗಿಕೊಂಡು ನಿಮ್ಮ ಆತ್ಮಗಳನ್ನು ಕಾಯುವ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
Kannada Bible (KNCL) BSI 2016
ನೀವು ದಾರಿತಪ್ಪಿದ ಕುರಿಗಳಂತೆ ಅಲೆಯುತ್ತಿದ್ದಿರಿ. ಈಗಲಾದರೋ ನಿಮ್ಮ ಆತ್ಮಗಳನ್ನು ಕಾಯುವ ಕುರಿಗಾಹಿಯೂ ಸಂರಕ್ಷಕನೂ ಆದಾತನ ಬಳಿಗೆ ಮರಳಿದ್ದೀರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ, “ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ.” ಆದರೆ ಈಗ ನೀವು ತಿರುಗಿ ನಿಮ್ಮ ಆತ್ಮಗಳ ಕುರುಬ ಹಾಗೂ ಸಭಾಧ್ಯಕ್ಷರೂ ಆಗಿರುವ ಕ್ರಿಸ್ತ ಯೇಸುವಿನ ಬಳಿಗೆ ಬಂದಿದ್ದೀರಿ.