1 Peter 2:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಂಬಿಕೆಯುಳ್ಳ ಜನರಾದ ನಿಮಗೆ ಆ ಕಲ್ಲು (ಯೇಸು) ಹೆಚ್ಚು ಬೆಲೆಯುಳ್ಳದ್ದು. ಆದರೆ ನಂಬದ ಜನರಿಗೆ ಆತನು ಇಂತೆಂದಿದ್ದಾನೆ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದ್ದರಿಂದ ನಂಬುವವರಾದ ನಿಮಗೇ ಈ ಕಲ್ಲು ಅತ್ಯಮೂಲ್ಯವಾದುದು. ಆದರೆ ನಂಬದೆಯಿರುವವರಿಗೆ, “ಮನೆಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು”
Kannada BSI Bible 2016
ಆದದರಿಂದ ನಂಬುವವರಾದ ನಿಮಗೆ ಆತನು ಅಮೂಲ್ಯನಾಗಿದ್ದಾನೆ. ಅವಿಧೇಯರಿಗಾ ದರೋ ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ನಂಬುವವರಾದ ನಿಮಗೇ ಈ ಮಾನವುಂಟು. ನಂಬದೆಯಿರುವವರಿಗೋ - ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು ಎಂತಲೂ
Kannada Bible (KNCL) BSI 2016
ವಿಶ್ವಾಸವಿಟ್ಟಿರುವ ನಿಮಗಂತೂ ಈ ಶಿಲೆ ಅತ್ಯಮೂಲ್ಯವಾದುದು. “ಮನೆಕಟ್ಟುವವರು ಬೇಡವೆಂದು ಮೂಲೆಗೆಸೆದ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಗ ನಂಬುವವರಾದ ನಿಮಗೆ ಈ ಕಲ್ಲು ಅಮೂಲ್ಯವಾದುದು. ನಂಬದವರಿಗಾದರೋ, “ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು,”