1 Peter 2:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಂಬದಿರುವ ಜನರಿಗೆ ಆತನು:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ಪವಿತ್ರಗ್ರಂಥದಲ್ಲಿ ಇನ್ನೊಂದೆಡೆ ಬರೆದಿರುವುದೇನಂದರೆ, “ಅದು ಜನರು ಎಡವುವ ಕಲ್ಲು ಮುಗ್ಗರಿಸುವ ಬಂಡೆ.” ಅವರು ದೇವರ ವಾಕ್ಯಕ್ಕೆ ಅವಿಧೇಯರಾದ್ದರಿಂದ ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರನ್ನು ನೇಮಿಸಲಾಗಿದೆ.
Kannada BSI Bible 2016
ಅದು ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಆಗಿದೆ; ಅವರು ವಾಕ್ಯಕ್ಕೆ ಅವಿಧೇಯರಾದದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದು ಎಡವುವ ಕಲ್ಲು ಮುಗ್ಗರಿಸುವ ಬಂಡೆ ಎಂತಲೂ ಬರೆದಿರುವ ಮಾತು ಸರಿಬೀಳುತ್ತದೆ. ಅವರು ದೇವರ ವಾಕ್ಯವನ್ನು ನಂಬಲೊಲ್ಲದೆ ಇರುವದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ; ಅದಕ್ಕಾಗಿಯೇ ಅವರು ನೇಮಕವಾದರು.
Kannada Bible (KNCL) BSI 2016
“ಜನರು ಎಡವಿಬೀಳುವ ಕಲ್ಲಿದು; ಅವರು ಮುಗ್ಗರಿಸಿ ಬೀಳುವ ಬಂಡೆಯಿದು.” ವಿಶ್ವಾಸವಿಡದವರಿಗಾದರೋ ಮೇಲಿನ ವಾಕ್ಯಗಳು ಅನ್ವಯಿಸುತ್ತವೆ. ಜನರು ದೇವರ ವಾಕ್ಯದಲ್ಲಿ ವಿಶ್ವಾಸವಿಡದಿರುವುದರಿಂದಲೇ ಎಡವಿಬೀಳುತ್ತಾರೆ. ಅವರ ಬಗ್ಗೆ ದೈವಸಂಕಲ್ಪವೂ ಇದೇ ಆಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮತ್ತು, “ಜನರು ಎಡವಲು ಕಾರಣವಾಗುವ ಕಲ್ಲೂ ಅವರು ಬಿದ್ದುಹೋಗುವಂತೆ ಮಾಡುವ ಬಂಡೆಯೂ ಆಗಿರುತ್ತದೆ,” ಅವರು ವಾಕ್ಯಕ್ಕೆ ಅವಿಧೇಯರಾದ್ದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು.