1 Peter 3:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪವಿತ್ರ ಗ್ರಂಥವು ಹೇಳುವುದೇನೆಂದರೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ, “ಜೀವವನ್ನು ಬಯಸುತ್ತಾ ಸುದಿನಗಳನ್ನು ನೋಡುವುದಕ್ಕೆ ಕಾದಿರುವಾತನು ಕೆಟ್ಟದ್ದನ್ನು ನುಡಿಯದಂತೆ ತನ್ನ ನಾಲಿಗೆಯನ್ನು ವಂಚನೆಯ ಮಾತುಗಳನ್ನಾಡದಂತೆ ತುಟಿಗಳನ್ನು ಬಿಗಿಹಿಡಿದುಕೊಳ್ಳಲಿ.
Kannada BSI Bible 2016
ಜೀವವನ್ನು ಪ್ರೀತಿಸಿ ಸುದಿನಗಳನ್ನು ನೋಡುವದಕ್ಕೆ ಇಷ್ಟವುಳ್ಳವನು ಕೆಟ್ಟ ದ್ದನ್ನು ನುಡಿಯದಂತೆ ತನ್ನ ನಾಲಿಗೆಯನ್ನೂ ವಂಚನೆಯ ಮಾತುಗಳನ್ನಾಡದ ಹಾಗೆ ತನ್ನ ತುಟಿಗಳನ್ನೂ ಬಿಗಿ ಹಿಡಿಯಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಜೀವದಲ್ಲಿ ಸಂತೋಷಪಟ್ಟು ಸುದಿನಗಳನ್ನು ನೋಡುವದಕ್ಕೆ ಇಷ್ಟವುಳ್ಳವನು ಕೆಟ್ಟದ್ದನ್ನು ನುಡಿಯದಂತೆ ತನ್ನ ನಾಲಿಗೆಯನ್ನೂ ವಂಚನೆಯ ಮಾತುಗಳನ್ನಾಡದಂತೆ ತುಟಿಗಳನ್ನೂ ಬಿಗಿಹಿಡಿಯಲಿ.
Kannada Bible (KNCL) BSI 2016
“ಆನಂದಕರ ಜೀವನದ ಬಯಕೆ ಯಾರಿಗಿದೆಯೋ ಸುದಿನಗಳನು ಕಾಣುವ ಆಶೆ ಯಾರಿಗಿದೆಯೋ ಅಂಥವನು ಬಿಗಿಹಿಡಿಯಲಿ ನಾಲಿಗೆಯನು ಕೆಟ್ಟದನು ನುಡಿಯದಂತೆ ತಡೆಹಿಡಿಯಲಿ ತುಟಿಯನು ಕಪಟವನಾಡದಂತೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಬಾಳನ್ನು ಪ್ರೀತಿಸಿ ಸುದಿನಗಳನ್ನು ನೋಡುವುದಕ್ಕೆ ಇಷ್ಟವುಳ್ಳವನು ಕೆಟ್ಟದ್ದನ್ನು ನುಡಿಯದಂತೆ ತನ್ನ ನಾಲಿಗೆಯನ್ನೂ ವಂಚನೆಯ ಮಾತುಗಳನ್ನಾಡದ ಹಾಗೆ ತನ್ನ ತುಟಿಗಳನ್ನೂ ಬಿಗಿ ಹಿಡಿಯಲಿ.