1 Peter 3:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀತಿವಂತರನ್ನು ಪ್ರಭುವು ಕಾಯುತ್ತಾನೆ;
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ ಕರ್ತನು ನೀತಿವಂತರನ್ನು ಕಟಾಕ್ಷಿಸುತ್ತಾನೆ ಮತ್ತು ಆತನು ಅವರ ವಿಜ್ಞಾಪನೆಗಳಿಗೆ ಕಿವಿಗೊಡುತ್ತಾನೆ. ಆದರೆ ಕೆಡುಕರಿಗೋ ಕರ್ತನು ವಿಮುಖನಾಗಿರುತ್ತಾನೆ.”
Kannada BSI Bible 2016
ಕರ್ತನ ದೃಷ್ಟಿ ನೀತಿವಂತರ ಮೇಲಿದೆ. ಆತನು ಅವರ ಪ್ರಾರ್ಥನೆಗಳಿಗೆ ಕಿವಿ ಗೊಡುತ್ತಾನೆ; ಕೆಟ್ಟದ್ದನ್ನು ಮಾಡುವವರಿಗೆ ಕರ್ತನ ಮುಖವು ವಿರೋಧವಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕಂದರೆ ಕರ್ತನು ನೀತಿವಂತರನ್ನು ಕಟಾಕ್ಷಿಸುತ್ತಾನೆ, ಆತನು ಅವರ ವಿಜ್ಞಾಪನೆಗಳಿಗೆ ಕಿವಿಗೊಡುತ್ತಾನೆ. ಕೆಡುಕರಿಗೋ ಕರ್ತನು ಕೋಪದ ಮುಖವುಳ್ಳವನಾಗಿರುತ್ತಾನೆ ಎಂದು ಬರೆದದೆ.
Kannada Bible (KNCL) BSI 2016
ನೀತಿವಂತರನು ಕಾಯುವನು ಸರ್ವೇಶ್ವರನು ಅವರ ವಿಜ್ಞಾಪನೆಗೆ ಕಿವಿಗೊಡುವನು. ಕೆಡುಕರಿಗಾದರೋ ಆತನು ವಿಮುಖನು,” ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ನೀತಿವಂತರ ಮೇಲೆ ಕರ್ತದೇವರು ದೃಷ್ಟಿ ಇಡುತ್ತಾರೆ. ಅವರ ಪ್ರಾರ್ಥನೆಗಳಿಗೆ ಕರ್ತದೇವರು ಕಿವಿಗೊಡುತ್ತಾರೆ. ಆದರೆ ಕೆಟ್ಟದ್ದನ್ನು ಮಾಡುವವರಿಗೆ ದೇವರು ವಿಮುಖರಾಗಿದ್ದಾರೆ,” ಎಂದು ಪವಿತ್ರ ವೇದದಲ್ಲಿ ಬರೆದಿದೆಯಲ್ಲಾ?