1 Peter 3:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಯೋಗ್ಯವಾದುದನ್ನು ಮಾಡುವಾಗ ನೀವು ಸಂಕಟಪಡಬೇಕಾಗಬಹುದು. ಆದರೆ “ನಿಮ್ಮನ್ನು ಸಂಕಟಕ್ಕೆ ಒಳಪಡಿಸುವ ಜನರಿಗೆ ಹೆದರಬೇಡಿರಿ ಮತ್ತು ಚಿಂತಿಸಬೇಡಿರಿ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಂದು ವೇಳೆ ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ನೀವು ಧನ್ಯರೇ. ಅವರ ಬೆದರಿಕೆಗೆ ಹೆದರಬೇಡಿರಿ, ಕಳವಳಪಡಬೇಡಿರಿ.
Kannada BSI Bible 2016
ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ಸಂತೋಷವುಳ್ಳವರು. ಅವರ ಬೆದರಿಸುವಿಕೆಗೆ ಹೆದರಬೇಡಿರಿ ಮತ್ತು ಕಳವಳ ಪಡಬೇಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಂದು ವೇಳೆ ನೀತಿಯ ನಿವಿುತ್ತವೇ ಬಾಧೆಪಟ್ಟರೆ ನೀವು ಧನ್ಯರೇ.
Kannada Bible (KNCL) BSI 2016
ನ್ಯಾಯನೀತಿಯ ನಿಮಿತ್ತ ಹಿಂಸೆಯನ್ನು ಅನುಭವಿಸಬೇಕಾಗಿ ಬಂದರೂ ನೀವು ಭಾಗ್ಯವಂತರು. ಮಾನವರ ಬೆದರಿಕೆಗೆ ಹೆದರಬೇಡಿ, ಕಳವಳ ಪಡಬೇಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ನಿಮಗೆ ಆಶೀರ್ವಾದವಿರುವುದು. ಅವರ ಬೆದರಿಕೆಗೆ ಹೆದರಬೇಡಿರಿ ಮತ್ತು ಕಳವಳಪಡಬೇಡಿರಿ.