1 Peter 3:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೆಟ್ಟದ್ದನ್ನು ಮಾಡಿ ಸಂಕಟ ಪಡುವುದಕ್ಕಿಂತ ಒಳ್ಳೆಯದನ್ನು ಮಾಡಿ ಸಂಕಟಪಡುವುದು ಉತ್ತಮ. ಹೌದು, ಅದು ದೇವರ ಅಪೇಕ್ಷೆಯಾಗಿದ್ದರೆ ಅದೇ ಒಳ್ಳೆಯದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೆಟ್ಟ ನಡತೆಯುಳ್ಳವರಾಗಿ ಬಾಧೆಪಡುವುದಕ್ಕಿಂತಲೂ ಒಳ್ಳೆ ನಡತೆಯುಳ್ಳವರಾಗಿಯೇ ದೇವರ ಚಿತ್ತದ ಪ್ರಕಾರ ಬಾಧೆಪಡುವುದು ಉತ್ತಮ.
Kannada BSI Bible 2016
ಕೆಟ್ಟ ನಡತೆಯುಳ್ಳವರಾಗಿ ಬಾಧೆಪಡುವದಕ್ಕಿಂತ ಒಳ್ಳೇನಡತೆಯುಳ್ಳವರಾಗಿಯೇ ದೇವರ ಚಿತ್ತವಿದ್ದರೆ ಬಾಧೆಪಡುವದು ಲೇಸು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೆಟ್ಟ ನಡತೆಯುಳ್ಳವರಾಗಿ ಬಾಧೆಪಡುವದಕ್ಕಿಂತ ಒಳ್ಳೇ ನಡತೆಯುಳ್ಳವರಾಗಿಯೇ ದೇವರ ಚಿತ್ತವಿದ್ದರೆ ಬಾಧೆಪಡುವದು ಲೇಸು.
Kannada Bible (KNCL) BSI 2016
ಕೆಟ್ಟದ್ದನ್ನು ಮಾಡಿ ಶಿಕ್ಷೆಯನ್ನು ಅನುಭವಿಸುವುದಕ್ಕಿಂತ ದೇವರ ಚಿತ್ತವಾದರೆ, ಒಳ್ಳೆಯದನ್ನು ಮಾಡಿ ಶಿಕ್ಷೆಯನ್ನು ಅನುಭವಿಸುವುದೇ ಲೇಸು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೆಟ್ಟನಡತೆಯುಳ್ಳವರಾಗಿ ಬಾಧೆಪಡುವುದಕ್ಕಿಂತ ಒಳ್ಳೆಯ ನಡತೆಯುಳ್ಳವರಾಗಿಯೇ ದೇವರ ಚಿತ್ತವಿದ್ದರೆ ಬಾಧೆಪಡುವುದು ಲೇಸು.