1 Peter 3:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ನೀರು ಈಗ ನಿಮ್ಮನ್ನು ರಕ್ಷಿಸುತ್ತಿರುವ ದೀಕ್ಷಾಸ್ನಾನದಂತಿದೆ. ದೀಕ್ಷಾಸ್ನಾನವು ಮೈಕೊಳೆಯನ್ನು ತೊಳೆಯುವಂಥದ್ದಲ್ಲ. ಅದು ಪರಿಶುದ್ಧ ಹೃದಯ ಬೇಕೆಂದು ವಿಜ್ಞಾಪಿಸಿಕೊಳ್ಳುವಂಥದಾಗಿದೆ. ಯೇಸು ಕ್ರಿಸ್ತನು ಸಾವಿನಿಂದ ಎದ್ದುಬಂದದ್ದರಿಂದ ಅದು ನಿಮ್ಮನ್ನು ರಕ್ಷಿಸುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ನೀರಿಗೆ ಅನುರೂಪವಾದ ದೀಕ್ಷಾಸ್ನಾನವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ. ಅದು ದೇಹದ ಮೇಲಿನ ಕೊಳೆಯನ್ನು ಹೊಗಲಾಡಿಸುವಂಥದ್ದಲ್ಲ. ಆದರೆ ಒಳ್ಳೆಯ ಮನಸ್ಸಾಕ್ಷಿ ಬೇಕೆಂದು ದೇವರಿಗೆ ವಿಜ್ಞಾಪಿಸಿಕೊಳ್ಳುವಂಥದಾಗಿದೆ.
Kannada BSI Bible 2016
ಆ ನೀರಿಗೆ ಅನುರೂಪವಾದ ಬಾಪ್ತಿಸ್ಮವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ; (ಅದು ಮೈಕೊಳೆಯನ್ನು ಹೋಗಲಾಡಿ ಸುವಂಥದ್ದಲ್ಲ. ಆದರೆ ದೇವರ ಕಡೆಗಿರುವ ನಮ್ಮ ಒಳ್ಳೇ ಮನಸ್ಸಾಕ್ಷಿಯ ಉತ್ತರವಾಗಿದೆ).ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ನೀರಿಗೆ ಅನುರೂಪವಾದ ದೀಕ್ಷಾಸ್ನಾನವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ; ಅದು ಮೈಕೊಳೆಯನ್ನು ಹೋಗಲಾಡಿಸುವಂಥದಲ್ಲ, ಒಳ್ಳೇ ಮನಸ್ಸಾಕ್ಷಿ ಬೇಕೆಂದು ದೇವರಿಗೆ ವಿಜ್ಞಾಪಿಸಿಕೊಳ್ಳುವಂಥದೇ.
Kannada Bible (KNCL) BSI 2016
ಇದು ದೀಕ್ಷಾಸ್ನಾನವನ್ನು ಸೂಚಿಸುವ ಒಂದು ಸಂಕೇತ. ಈ ದೀಕ್ಷಾಸ್ನಾನ ಯೇಸುಕ್ರಿಸ್ತರ ಪುನರುತ್ಥಾನದ ಮೂಲಕ ನಿಮಗೆ ಜೀವೋದ್ಧಾರವನ್ನು ನೀಡುತ್ತದೆ. ಇದು ಕೇವಲ ದೇಹದ ಮಾಲಿನ್ಯವನ್ನು ಹೋಗಲಾಡಿಸುವಂಥಾದ್ದಲ್ಲ; ಶುದ್ಧಮನಸ್ಸಿನಿಂದ ದೇವರಿಗೆ ಮಾಡುವ ಪ್ರಮಾಣ ವಚನವಾಗಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ನೀರು ದೀಕ್ಷಾಸ್ನಾನವನ್ನು ಸೂಚಿಸುವಂತದ್ದಾಗಿದೆ. ಈ ದೀಕ್ಷಾಸ್ನಾನ ಕ್ರಿಸ್ತ ಯೇಸುವಿನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ. ಅದು ಮೈಕೊಳೆಯನ್ನು ಹೋಗಲಾಡಿಸುವಂಥದಲ್ಲ. ಆದರೆ ಒಳ್ಳೆಯ ಮನಸ್ಸಾಕ್ಷಿಯು ಬೇಕೆಂದು ದೇವರನ್ನು ಬೇಡಿಕೊಳ್ಳುವಂಥದ್ದಾಗಿದೆ.