1 Peter 3:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈಗ ಯೇಸು ಪರಲೋಕಕ್ಕೆ ಹೋಗಿರುವನು. ಆತನು ದೇವರ ಬಲಗಡೆಯಲ್ಲಿದ್ದಾನೆ. ಆತನು ದೇವದೂತರನ್ನೂ ಅಧಿಕಾರಿಗಳನ್ನೂ ಶಕ್ತಿಗಳನ್ನೂ ಆಳುತ್ತಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ, ದೇವದೂತರು, ಅಧಿಕಾರಿಗಳು ಮತ್ತು ಶಕ್ತಿಗಳೂ ಆತನ ಸ್ವಾಧೀನವಾಗಿವೆ.
Kannada BSI Bible 2016
ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೇವದೂತರೂ ಅಧಿಕಾರಿಗಳೂ ಮಹತ್ವಗಳೂ ಆತನ ಸ್ವಾಧೀನವಾಗಿವೆ.
Kannada Bible (KNCL) BSI 2016
ಯೇಸುಕ್ರಿಸ್ತರು ಸ್ವರ್ಗಕ್ಕೆ ಏರಿ, ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿದ್ದಾರೆ; ದೂತಗಣಗಳ ಮೇಲೂ ಸ್ವರ್ಗೀಯ ಶಕ್ತರ ಹಾಗೂ ಅಧಿಕಾರಿಗಳ ಮೇಲೂ ಆಳ್ವಿಕೆ ನಡೆಸುತ್ತಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕ್ರಿಸ್ತ ಯೇಸು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾರೆ, ದೇವದೂತರೂ ಪ್ರಭುತ್ವಗಳೂ ಅಧಿಕಾರಗಳೂ ಅವರಿಗೆ ಅಧೀನವಾಗಿವೆ.