1 Peter 3:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಾತ್ವಿಕವೂ ಶಾಂತವೂ ಆದ ಆಂತರ್ಯವೇ ನಿಮ್ಮ ಸೌಂದರ್ಯವಾಗಿರಬೇಕು. ಆ ಸೌಂದರ್ಯ ನಶಿಸಿಹೋಗುವುದಿಲ್ಲ. ಅದು ದೇವರಿಗೆ ಬಹು ಅಮೂಲ್ಯವಾದದ್ದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ದೇವರ ದೃಷ್ಟಿಯಲ್ಲಿ ಅಮೂಲ್ಯವಾದದ್ದೂ ಮತ್ತು ಶಾಶ್ವತವಾದದ್ದೂ ಆಗಿರುವ ಸಾತ್ವಿಕತೆ ಮತ್ತು ಶಾಂತಮನಸ್ಸು ಎಂಬ ಆಂತರ್ಯದ ಭೂಷಣವೇ ನಿಮ್ಮ ಅಲಂಕಾರವಾಗಿರಲಿ.
Kannada BSI Bible 2016
ಆದರೆ ಸಾತ್ವಿಕವಾದ ಶಾಂತ ಮನಸ್ಸು ಎಂಬ ಹೃದಯದ ಮರೆಯಾದ ಮನುಷ್ಯನ ಅಲಂಕಾರವೇ ನಿಮಗಿರಲಿ. ಇದು ಅಕ್ಷಯ ವಾಗಿದ್ದು ದೇವರ ದೃಷ್ಟಿಗೆ ಬಹು ಬೆಲೆಯುಳ್ಳದ್ದಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಜಡೆಹೆಣೆದುಕೊಳ್ಳುವದು ಚಿನ್ನದ ಒಡವೆಗಳನ್ನು ಇಟ್ಟುಕೊಳ್ಳುವದು ವಸ್ತ್ರಗಳನ್ನು ಧರಿಸಿಕೊಳ್ಳುವದು ಈ ಮೊದಲಾದ ಹೊರಗಣ ಶೃಂಗಾರವೇ ನಿಮ್ಮ ಅಲಂಕಾರವಾಗಿರಬಾರದು.
Kannada Bible (KNCL) BSI 2016
ಬದಲಿಗೆ, ಶಾಶ್ವತವಾದ, ಶಾಂತ ಹಾಗೂ ಸೌಮ್ಯಗುಣಗಳಿಂದ ಕೂಡಿದ ಆಂತರ್ಯದ ಭೂಷಣವೇ ನಿಮ್ಮ ಅಲಂಕಾರವಾಗಿರಲಿ. ಇದೇ ದೇವರ ದೃಷ್ಟಿಯಲ್ಲಿ ಅತೀ ಅಮೂಲ್ಯವಾದುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರ ಬದಲು ಸಾತ್ವಿಕವಾದ ಶಾಂತಮನಸ್ಸು ಎಂಬ ಹೃದಯದ ಆಂತರ್ಯದ ಅಲಂಕಾರವೇ ನಿಮ್ಮದಾಗಿರಲಿ. ಇದು ದೇವರ ದೃಷ್ಟಿಗೆ ಬಹು ಅಮೂಲ್ಯವಾದದ್ದಾಗಿದೆ.