1 Peter 3:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಸಾರಳಂತಹ ಸ್ತ್ರೀಯರ ಬಗ್ಗೆ ಹೇಳುತ್ತಿದ್ದೇನೆ. ಅವಳು ತನ್ನ ಗಂಡನಾದ ಅಬ್ರಹಾಮನಿಗೆ ವಿಧೇಯಳಾಗಿದ್ದು, ಅವನನ್ನು ತನ್ನ ಒಡೆಯನೆಂದು ಕರೆದಳು. ಸ್ತ್ರೀಯರಾದ ನೀವು ಭಯಪಡದೆ ಯಾವಾಗಲೂ ಯೋಗ್ಯವಾದುದನ್ನು ಮಾಡಿದರೆ, ನೀವು ಸಾರಳ ನಿಜವಾದ ಮಕ್ಕಳಾಗುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಾರಳು ಹಾಗೆಯೇ ಅಬ್ರಹಾಮನಿಗೆ ವಿಧೇಯಳಾಗಿದ್ದು ಅವನನ್ನು ಯಜಮಾನ ಎಂದು ಕರೆದಳು. ನೀವು ಒಳ್ಳೆಯದನ್ನು ಮಾಡುತ್ತಾ ಯಾವ ಭೀತಿಗೂ ಭಯಪಡುವುದಿಲ್ಲವಾದರೆ ನೀವು ಆಕೆಯ ಕುವರಿಯರೇ ಆಗುವಿರಿ.
Kannada BSI Bible 2016
ಹಾಗೆಯೇ ಸಾರಳು ಅಬ್ರಹಾಮನಿಗೆ ವಿಧೇಯಳಾಗಿದ್ದು ಅವನನ್ನು ಯಜಮಾನ ಎಂದು ಕರೆದಳು. ನೀವು ಸಾರಳ ಕುಮಾರ್ತೆಗಳಾಗಿದ್ದೀರಲ್ಲಾ; ನೀವು ಒಳ್ಳೇದನ್ನು ಮಾಡುವದಾದರೆ ಯಾವ ಭೀತಿಗೂ ಗಾಬರಿ ಪಡುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಾರಳು ಹಾಗೆಯೇ ಅಬ್ರಹಾಮನಿಗೆ ವಿಧೇಯಳಾಗಿದ್ದು ಅವನನ್ನು ಯಜಮಾನ ಎಂದು ಕರೆದಳು ಎಂದು ಬರೆದದೆ. ನೀವು ಸಾರಳ ಕುಮಾರ್ತೆಗಳಾಗಿದ್ದೀರಲ್ಲಾ.
Kannada Bible (KNCL) BSI 2016
ಉದಾಹರಣೆಗೆ: ಸಾರಳು ತನ್ನ ಪತಿ ಅಬ್ರಹಾಮನಿಗೆ ವಿಧೇಯಳಾಗಿದ್ದು ಆತನನ್ನು, “ಯಜಮಾನ” ಎಂದು ಕರೆಯುತ್ತಿದ್ದಳು. ಯಾವ ಭಯಭೀತಿಯಿಲ್ಲದೆ ಸತ್ಕಾರ್ಯಗಳನ್ನು ಮಾಡುವವರಾಗಿದ್ದರೆ, ನೀವೂ ಸಾರಳ ಕುಮಾರ್ತಿಯರೇ ಹೌದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗೆಯೇ ಸಾರಳು ಅಬ್ರಹಾಮನಿಗೆ ವಿಧೇಯಳಾಗಿದ್ದು ಅವನನ್ನು “ಯಜಮಾನ” ಎಂದು ಕರೆದಳು. ನೀವು ಸಾರಳ ಪುತ್ರಿಯರಾಗಿದ್ದೀರಲ್ಲಾ. ನೀವು ಒಳ್ಳೆಯದು ಯಾವುದೋ ಅದನ್ನು ಮಾಡುವುದಾದರೆ ಯಾವುದಕ್ಕೂ ಭಯಪಡಬೇಕಾಗಿರುವುದಿಲ್ಲ.