1 Peter 4:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕ್ರಿಸ್ತನು ದೇಹಾರೂಢನಾಗಿದ್ದಾಗ ಸಂಕಟಪಟ್ಟನು. ಆದ್ದರಿಂದ ಕ್ರಿಸ್ತನಲ್ಲಿದ್ದ ಮನೋಭಾವವನ್ನೇ ನೀವೂ ಹೊಂದಿದವರಾಗಿ ನಿಮ್ಮನ್ನು ಬಲಪಡಿಸಿಕೊಳ್ಳಿರಿ. ಶಾರೀರಿಕವಾಗಿ ಸಂಕಟವನ್ನು ಅನುಭವಿಸಿದ ವ್ಯಕ್ತಿಯು ಪಾಪದಿಂದ ಮುಕ್ತನಾಗಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕ್ರಿಸ್ತನು ನಮಗೋಸ್ಕರ ತನ್ನ ಶರೀರದಲ್ಲಿ ಬಾಧೆಪಟ್ಟದ್ದರಿಂದ ನೀವು ಸಹ ಅದೇ ಮನೋಭಾವವುಳ್ಳವರಾಗಿದ್ದು ಬಾಧೆಪಡಲು ಸಿದ್ಧರಾಗಿರಿ. ಏಕೆಂದರೆ ಶರೀರದಲ್ಲಿ ಬಾಧೆಪಟ್ಟವನು ಪಾಪ ಮಾಡುವುದನ್ನು ನಿಲ್ಲಿಸಿದವನಾಗಿದ್ದಾನೆ.
Kannada BSI Bible 2016
ಕ್ರಿಸ್ತನು ಶರೀರದಲ್ಲಿ ನಮಗೋಸ್ಕರ ಬಾಧೆಪಟ್ಟದ್ದರಿಂದ ನೀವು ಸಹ ಆತನಿಗಿದ್ದ ಮನಸ್ಸನ್ನು ಧರಿಸಿಕೊಳ್ಳಿರಿ. ಯಾಕಂದರೆ ಶರೀರ ದಲ್ಲಿ ಬಾಧೆಪಟ್ಟವನು ಪಾಪಮಾಡುವದನ್ನು ನಿಲ್ಲಿಸಿ ಬಿಟ್ಟಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕ್ರಿಸ್ತನು ಶರೀರದಲ್ಲಿ ಬಾಧೆಪಟ್ಟದ್ದರಿಂದ ನೀವು ಸಹ ಆತನಿಗಿದ್ದ ಭಾವವನ್ನೇ ಹಿಡಿದುಕೊಳ್ಳಿರಿ.
Kannada Bible (KNCL) BSI 2016
ಕ್ರಿಸ್ತಯೇಸು ದೈಹಿಕವಾಗಿ ಹಿಂಸೆಬಾಧೆಯನ್ನು ಅನುಭವಿಸಿದ್ದರಿಂದ ನೀವೂ ಅವರಲ್ಲಿದ್ದ ಅದೇ ಭಾವನೆಯಿಂದ ನಿಮ್ಮನ್ನು ಬಲಪಡಿಸಿಕೊಳ್ಳಿರಿ. ದೈಹಿಕವಾಗಿ ಹಿಂಸೆಪಡುವವನು ಪಾಪ ಜೀವನದೊಡನೆ ಸಂಬಂಧವನ್ನು ಕಡಿದುಕೊಂಡವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಕ್ರಿಸ್ತ ಯೇಸುವು ನಮಗೋಸ್ಕರ ತಮ್ಮ ಮಾಂಸದಲ್ಲಿ ಬಾಧೆಪಟ್ಟದ್ದರಿಂದ ನೀವು ಸಹ ಅವರಿಗಿದ್ದ ಮನೋಭಾವವನ್ನು ಧರಿಸಿಕೊಳ್ಳಿರಿ. ಏಕೆಂದರೆ ಮಾಂಸದಲ್ಲಿ ಬಾಧೆಪಟ್ಟವರು ಪಾಪಮಾಡುವುದನ್ನು ನಿಲ್ಲಿಸಿಬಿಡುವರು.