1 Peter 4:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಮ್ಮಲ್ಲಿ ಪ್ರತಿಯೊಬ್ಬರೂ ದೇವರಿಂದ ಆತ್ಮಿಕ ವರವನ್ನು ಪಡೆದುಕೊಂಡಿರಿ. ದೇವರು ನಿಮಗೆ ಅನೇಕ ವಿಧಗಳಲ್ಲಿ ತನ್ನ ಕೃಪೆಯನ್ನು ದಯಪಾಲಿಸಿರುವನು. ನೀವು ದೇವರ ವರಗಳನ್ನು ಉಪಯೋಗಿಸುವ ಜವಾಬ್ದಾರಿಯುತರಾದ ಸೇವಕರಾಗಿದ್ದೀರಿ. ಆದ್ದರಿಂದ ಒಳ್ಳೆಯ ಸೇವಕರಾಗಿರಿ; ಪರಸ್ಪರ ಸೇವೆ ಮಾಡಲು ನಿಮ್ಮ ವರಗಳನ್ನು ಉಪಯೋಗಿಸಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವೆಲ್ಲರು ದೇವರ ವಿವಿಧ ವರಗಳ ವಿಷಯದಲ್ಲಿ ಒಳ್ಳೆಯ ನಿರ್ವಾಹಕರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ಕೃಪಾವರವನ್ನು ಎಲ್ಲರ ಸೇವೆಗಾಗಿ ಉಪಯೋಗಿಸಕೊಳ್ಳಲಿ.
Kannada BSI Bible 2016
ನೀವೆಲ್ಲರು ದೇವರ ವಿವಿಧ ಕೃಪೆಯ ವಿಷಯದಲ್ಲಿ ಒಳ್ಳೇ ಮನೆವಾರ್ತೆಯವರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ವರವನ್ನು ಎಲ್ಲರ ಸೇವೆಯಲ್ಲಿ ಉಪಯೋಗಿಸಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವೆಲ್ಲರು ದೇವರ ವಿವಿಧ ಕೃಪೆಯ ವಿಷಯದಲ್ಲಿ ಒಳ್ಳೇ ಮನೆವಾರ್ತೆಯವರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ಕೃಪಾವರವನ್ನು ಎಲ್ಲರ ಸೇವೆಯಲ್ಲಿ ಉಪಯೋಗಿಸಲಿ.
Kannada Bible (KNCL) BSI 2016
ದೇವರ ವಿವಿಧ ವರಗಳ ವಿಷಯದಲ್ಲಿ ಉತ್ತಮ ನಿರ್ವಾಹಕನಂತೆ ಪ್ರತಿಯೊಬ್ಬನೂ ದೇವರು ತನಗೆ ಕೊಟ್ಟಿರುವ ವಿಶೇಷ ವರದಾನಗಳನ್ನು ಇತರರ ಒಳಿತಿಗಾಗಿ ಬಳಸಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ದೇವರಿಂದ ವಿವಿಧ ಕೃಪಾವರಗಳನ್ನು ಹೊಂದಿರಲಾಗಿ ಒಳ್ಳೆಯ ನಿರ್ವಾಹಕರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿರುವ ವರಗಳನ್ನು ಎಲ್ಲರ ಸೇವೆಯಲ್ಲಿ ಉಪಯೋಗಿಸಲಿ.